newsfirstkannada.com

‘ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಕುಮಾರಸ್ವಾಮಿ’- ಸಿಎಂ ಸಿದ್ದರಾಮಯ್ಯ ಕಿಡಿ

Share :

08-08-2023

    ಮಾಜಿ ಸಿಎಂ ಹೆಚ್​​ಡಿಕೆ ವಿರುದ್ಧ ಕಿಡಿ

    ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

    ಸ್ಥಿಮಿತತೆ ಕಳೆದುಕೊಂಡ್ರಾ ಎಂದು ಪ್ರಶ್ನೆ!

ಬೆಂಗಳೂರು: ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಕಾರಿದ್ದಾರೆ. ಸೋಲಿನ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿದ್ದೀರಾ? ಎಂದು ಹೆಚ್​ಡಿಕೆಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿದ ಸಿಎಂ ಸಿದ್ದರಾಮಯ್ಯ, ಮಾನ್ಯ ಕುಮಾರಸ್ವಾಮಿ ಅವರೇ ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ ಎಂದರು.

ಈ ಹಿಂದೆ ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. ನಿಮ್ಮ ಸಚಿವರ ವಿರುದ್ಧ ಕಾಂಗ್ರೆಸ್​ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಟ್ವೀಟ್​ ಮಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಕುಮಾರಸ್ವಾಮಿ’- ಸಿಎಂ ಸಿದ್ದರಾಮಯ್ಯ ಕಿಡಿ

https://newsfirstlive.com/wp-content/uploads/2023/07/Siddaramaiah_2.jpg

Load More