newsfirstkannada.com

ರಾಜ್ಯದ ಸ್ತಬ್ಧ ಚಿತ್ರಕ್ಕೆ ನೋ ಎಂದ ಮೋದಿ ಸರ್ಕಾರ; ರಾಜನಾಥ್ ಸಿಂಗ್​​ಗೆ ಸಿದ್ದರಾಮಯ್ಯ ಪತ್ರ

Share :

Published January 12, 2024 at 9:33am

    ಕೇಂದ್ರದ ಜೊತೆ ರಾಜ್ಯದ ಸ್ತಬ್ಧ ಚಿತ್ರಕ್ಕಾಗಿ ಜಟಾಪಟಿ

    14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸಲಾಗುತ್ತಿದೆ

    2023ರಲ್ಲಿ ನಾರಿ ಶಕ್ತಿ ಸ್ತಬ್ಧಚಿತ್ರ ಪ್ರದರ್ಶನಗೊಂಡಿತ್ತು

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ದಚಿತ್ರವನ್ನು ಸೇರಿಸುವಂತೆ ಪತ್ರ ಬರೆದಿದ್ದಾರೆ.

ಕಳೆದ 15 ವರ್ಷಗಳಿಂದ ಕರ್ನಾಟಕ ಕರ್ತವ್ಯ ಪಥದಲ್ಲಿ ನಡೆಯುವ ಪೆರೇಡ್‌ನಲ್ಲಿ ಭಾಗಿಯಾಗಿ ಹಲವು ಪ್ರಶಸ್ತಿ ಗಳಿಸಿದೆ. ಬ್ರ್ಯಾಂಡ್ ಬೆಂಗಳೂರು ಟ್ಯಾಬ್ಲೊ ಪರೇಡ್‌ನಲ್ಲಿ ಬೆಂಗಳೂರನ್ನು ಪ್ರತಿನಿಧಿಸುತ್ತೆ. ಬೆಂಗಳೂರು ಯುನೆಸ್ಕೋದ ಎರಡನೇ ಬೆಸ್ಟ್ ಸುಂದರ ಏರ್​ಪೋರ್ಟ್ ಎಂಬ ಖ್ಯಾತಿ ಗಳಿಸಿದೆ. ಪೆರೇಡ್‌ಗೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಜನವರಿ 26ರಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ತಬ್ಧಚಿತ್ರ, ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಕೇಂದ್ರ ಸರ್ಕಾರದ ಈ ಧೋರಣೆ ವಿರುದ್ಧ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಕರ್ನಾಟಕವು ಕಳೆದ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಜನವರಿ 26ಕ್ಕೆ ಕಳುಹಿಸುತ್ತಿದೆ. ಬರೋಬ್ಬರಿ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕದ್ದು. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧಚಿತ್ರ ವಿಜ್ರಂಬಿಸಿತ್ತು.

ಇದನ್ನೂ ಓದಿ: ರಾಜ್ಯಕ್ಕೆ ಮಾಡಿದ ಅಪಮಾನ, ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ -ಸ್ತಬ್ಧಚಿತ್ರ ತಿರಸ್ಕರಿಸಿದ್ದಕ್ಕೆ ಕೇಂದ್ರದ ವಿರುದ್ಧ CM ವಾಗ್ದಾಳಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಸ್ತಬ್ಧ ಚಿತ್ರಕ್ಕೆ ನೋ ಎಂದ ಮೋದಿ ಸರ್ಕಾರ; ರಾಜನಾಥ್ ಸಿಂಗ್​​ಗೆ ಸಿದ್ದರಾಮಯ್ಯ ಪತ್ರ

https://newsfirstlive.com/wp-content/uploads/2024/01/RAJANATH-SINGH.jpg

Load More