newsfirstkannada.com

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಮೇಜರ್ ಟ್ವಿಸ್ಟ್ ಕೊಟ್ಟ ಸಿಎಂ; ಪ್ರಧಾನಿ ಮೋದಿಗೆ ಪತ್ರ; ಹೇಳಿದ್ದೇನು?

Share :

Published May 1, 2024 at 4:03pm

Update May 1, 2024 at 4:11pm

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

    ಹಗರಣ ಬೆಳಕಿಗೆ ಬಂದ ಮೇಲೆ ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ಯಾರು?

    ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್ ದಾಖಲು

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯ, ರಾಷ್ಟ್ರದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಎಸ್‌ಐಟಿ ತನಿಖೆಗೆ ಆದೇಶಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಮೆಗಾ ಟ್ವಿಸ್ಟ್ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣ ಗೊತ್ತಿದ್ದೂ ಕೂಡ ಬಿಜೆಪಿ ಪಕ್ಷ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು. ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ನೀಡಿದ್ದು ಎರಡನೇ ತಪ್ಪು. ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: BREAKING: ಪ್ರಜ್ವಲ್ ರೇವಣ್ಣ ಇರೋ ಜಾಗ ಕೊನೆಗೂ ಪತ್ತೆ; ಈ ದಿನ ಬೆಂಗಳೂರಿಗೆ ವಾಪಸ್? 

ಬಿಜೆಪಿ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಪ್ರಮುಖವಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಮನವಿ ಮಾಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ. ಈಗ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಆರೋಪಿ ಪ್ರಜ್ವಲ್ ರೇವಣ್ಣ ಅವರು ಭಾರತದಲ್ಲಿ ತನಿಖೆ ಹಾಗೂ ವಿಚಾರಣೆಯನ್ನು ಎದುರಿಸಬೇಕು. ಹೀಗಾಗಿ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಪ್ರಜ್ವಲ್‌ರನ್ನು ವಿದೇಶದಿಂದ ಭಾರತಕ್ಕೆ ವಾಪಸ್ ಕರೆತರಬೇಕು. ಹೀಗಾಗಿ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿಎಂ ಪತ್ರದಲ್ಲಿ ಇರೋದೇನು?
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೃತ್ಯವು ದೇಶದ ಆತ್ಮಸಾಕ್ಷಿಯನ್ನು ಕಲಕಿದೆ. ಅಸಂಖ್ಯ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ನಡೆಸಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಪ್ರಜ್ವಲ್ ರೇವಣ್ಣ 2024ರ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ.

ಪ್ರಜ್ವಲ್ ರೇವಣ್ಣ ಭಯಾನಕ, ನಾಚಿಕೆಗೇಡಿನ ಕೃತ್ಯವು ದೇಶದ ಆತ್ಮಸಾಕ್ಷಿಯನ್ನು ಕಲಕಿದೆ. ಹೀಗಾಗಿ ನಮ್ಮ ಸರ್ಕಾರ ಆರೋಪ ಬೆಳಕಿಗೆ ಬಂದ ತಕ್ಷಣವೇ ಎಸ್‌ಐಟಿ ರಚಿಸಿದೆ. ಸಂತ್ರಸ್ತರು ಮುಂದೆ ಬಂದು ಪ್ರಜ್ವಲ್ ರೇವಣ್ಣ ವಿರುದ್ಧ ಏಪ್ರಿಲ್ 28ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಬಂಧನ ತಪ್ಪಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಪರಾರಿಯಾಗಿದ್ದಾರೆ.

ಕಳೆದ ಏಪ್ರಿಲ್ 27ರಂದೇ ರಾಜತಾಂತ್ರಿಕ ಪಾಸ್‌ ಪೋರ್ಟ್ ಬಳಸಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಎಸ್‌ಐಟಿ ಹಗಲು ರಾತ್ರಿ ಆರೋಪಗಳ ಬಗ್ಗೆ ತನಿಖೆ ನಡೆಸಲು ಕೆಲಸ ಮಾಡುತ್ತಿದೆ. ಪ್ರಜ್ವಲ್ ರೇವಣ್ಣರನ್ನು ದೇಶಕ್ಕೆ ವಾಪಸ್ ಕರೆ ತರುವುದು ಕಾನೂನಿನ ಪ್ರಕಾರ, ತನಿಖೆ ಎದುರಿಸಲು ಬಹಳ ಮುಖ್ಯ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರದ ವಿದೇಶಾಂಗ ಇಲಾಖೆ, ಕೇಂದ್ರದ ಗೃಹ ಇಲಾಖೆಗೆ ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್‌ಗೆ ರದ್ದಿಗೆ ಸೂಚನೆ ಕೊಡಿ. ಎಸ್‌ಐಟಿ ಇದಕ್ಕೆ ಸಂಬಂಧಪಟ್ಟಂತೆ ಅಗತ್ಯವಾದ ಸಂಪೂರ್ಣ ವಿವರ ನೀಡಲಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಸ್‌ಐಟಿ ವಿವರ ನೀಡಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಮೇಜರ್ ಟ್ವಿಸ್ಟ್ ಕೊಟ್ಟ ಸಿಎಂ; ಪ್ರಧಾನಿ ಮೋದಿಗೆ ಪತ್ರ; ಹೇಳಿದ್ದೇನು?

https://newsfirstlive.com/wp-content/uploads/2024/05/siddu-praj-modi.jpg

Load More