ತ.ನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ
ಕಾವೇರಿ ನೀರು ಉಳಿಸಿಕೊಳ್ಳಲು ಕರ್ನಾಟಕ ಪ್ರಯತ್ನ
ಜಲ ವಿವಾದಕ್ಕೆ ಮೋದಿ ಮಧ್ಯಸ್ಥಿಕೆ ವಹಿಸುತ್ತಾರಾ..?
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇಂದು ದೆಹಲಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಜೊತೆಗೆ ಪ್ರಧಾನಿಗಳ ಭೇಟಿಗೂ ಕಾಲಾವಕಾಶ ಕೇಳಿದ್ದಾರೆ.
ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರದ ಅನುಮತಿಗಾಗಿ ಕಾಯುತ್ತಿರುವ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಗೆ ತಮ್ಮ ಕಚೇರಿಗಳನ್ನು ಬಳಸಿಕೊಳ್ಳುವಂತೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರನ್ನು ಒತ್ತಾಯಿಸುವ ಸಾಧ್ಯತೆಯಿದೆ. ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಸೋಮವಾರ ಆದೇಶಿಸಿದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
#WATCH | Karnataka Chief Minister Siddaramaiah arrives at Delhi airport. pic.twitter.com/jwmEDvhFRT
— ANI (@ANI) September 19, 2023
ಮೋದಿ ಭೇಟಿಗೆ ಸಮಯ ಕೇಳಿದ್ದ CM
ಪ್ರಧಾನಿ ಮೋದಿ ಭೇಟಿಗೆ ಸಿಎಂ ಸಿದ್ದರಾಮಯ್ಯ ಕಾಲವಕಾಶ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾವೇರಿ ಸಂಕಷ್ಟದ ಬಗ್ಗೆ ಚರ್ಚಿಸಲು ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಗೂ ಕಾಲಾವಕಾಶ ಕೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ