/newsfirstlive-kannada/media/post_attachments/wp-content/uploads/2024/11/SIDDARATH-KOUL.jpg)
ಟೀಂ ಇಂಡಿಯಾ ವೇಗಿ ಸಿದ್ಧಾರ್ಥ್ ಕೌಲ್ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಸೋಶಿಯಲ್ ಮೀಡಿಯಾ ಮೂಲಕ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಸಿದ್ಧಾರ್ಥ್ ಕೌಲ್ ಭಾರತಕ್ಕಾಗಿ ODI ಮತ್ತು T20 ಕ್ರಿಕೆಟ್ ಆಡಿದ್ದಾರೆ. 2019ರಲ್ಲಿ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದರು. ಅಂದಿನಿಂದ ಸಿದ್ಧಾರ್ಥ್ ಕೌಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಪ್ರಯತ್ನದಲ್ಲಿದ್ದರು. 2008ರಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಅಂಡರ್-19 ವಿಶ್ವಕಪ್ ಗೆದ್ದಿತ್ತು. ಆ ತಂಡದಲ್ಲಿ ಸಿದ್ಧಾರ್ಥ್ ಕೌಲ್ ಇದ್ದರು.
ಇದನ್ನೂ ಓದಿ:RCB ಫ್ರಾಂಚೈಸಿಗೆ ಟಿ.ಎ ನಾರಾಯಣಗೌಡ ಎಚ್ಚರಿಕೆ.. ಕರವೇ ಅಧ್ಯಕ್ಷರು ಹೇಳಿದ್ದು ಏನು?
ಸಿದ್ಧಾರ್ಥ್ ಟೀಂ ಇಂಡಿಯಾ ಪರ 3 ODI ಮತ್ತು 3 T20 ಪಂದ್ಯಗಳನ್ನು ಆಡಿದ್ದಾರೆ. ಸಿದ್ಧಾರ್ಥ್ 2018ರಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ್ದರು. ಅದೇ ವರ್ಷ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಟಿ20 ಕ್ರಿಕೆಟ್‌ನಲ್ಲಿ 4 ವಿಕೆಟ್ ಕಬಳಿಸಿದ್ರೆ ಏಕದಿನದಲ್ಲಿ ಯಾವುದೇ ವಿಕೆಟ್ ಪಡೆಯಲಿಲ್ಲ.
ಐಪಿಎಲ್‌ನಲ್ಲೂ ಅದೃಷ್ಟದ ಪರೀಕ್ಷೆಗಿಳಿದಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಡೇರ್‌ಡೆವಿಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಆರ್​ಸಿಬಿ ಪರ ಆಡಿದ್ದರು. ಐಪಿಎಲ್‌ನಲ್ಲಿ 55 ಪಂದ್ಯಗಳನ್ನಾಡಿ 58 ವಿಕೆಟ್ ಪಡೆದಿದ್ದಾರೆ. 2022ರಲ್ಲಿ ಕೊನೆಯ ಐಪಿಎಲ್ ಪಂದ್ಯ ಆಡಿದ್ದರು.
ಇದನ್ನೂ ಓದಿ:RCB ಮಾಜಿ ಸ್ಪಿನ್ನರ್ ಚಹಲ್ ಪತ್ನಿಗೆ ಬೊಂಬಾಟ್ ಆಫರ್.. ಬಿಗ್ ಬಜೆಟ್ ಸಿನಿಮಾದಲ್ಲಿ ಧನಶ್ರೀ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us