newsfirstkannada.com

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಗಂಭೀರ ಆರೋಪ; ಏನದು?

Share :

Published June 21, 2024 at 5:02pm

Update June 21, 2024 at 5:04pm

    ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವ ಬಾಲಿವುಡ್​ ಗಾಯಕ

    ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ

    ರೋಹಿಣಿ ಜೊತೆ ಇನ್ನೂ ಇಬ್ಬರ ಮೇಲೆ ಆರೋಪ ಮಾಡಿದ ಗಾಯಕ ಲಕ್ಕಿ ಅಲಿ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್​ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಈ ಸಂಬಂಧ ತಮ್ಮ ಟ್ವೀಟರ್​ ಖಾತೆಯಲ್ಲಿ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: HDK ವಿರುದ್ಧ ನಾಲಿಗೆ ಹರಿಬಿಟ್ಟ ದರ್ಶನ್ ಮಹಿಳಾ ಅಭಿಮಾನಿಗೆ ಸಂಕಷ್ಟ; ಆಗಿದ್ದೇನು?

2022ರಲ್ಲೂ ದೂರು ಸಲ್ಲಿಸಿದ್ದ ಅಲಿ

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಅವರು, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾರೆ. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗಾಯಕ ಆರೋಪಿಸಿದ್ದಾರೆ.

ಲಕ್ಕಿ ಅಲಿ ಯಾರು?

ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರಾಗಿದ್ದಾರೆ. ಹಿಂದಿ, ತಮಿಳು ಸಿನಿಮಾಗಳಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಫೇಮಸ್​ ಆಗಿದ್ದಾರೆ. 1996ರಲ್ಲಿ ಅವರು ಬಿಡುಗಡೆ ಮಾಡಿದ್ದ ಸುನೋ ಎಂಬ ಆಲ್ಬಂನಲ್ಲಿದ್ದ ಬಹುತೇಕ ಹಾಡುಗಳು ಸೂಪರ್ ಹಿಟ್ ಆಗಿದ್ದವು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಗಂಭೀರ ಆರೋಪ; ಏನದು?

https://newsfirstlive.com/wp-content/uploads/2024/06/rohini.jpg

Load More