newsfirstkannada.com

ನಟ ದರ್ಶನ್​​ ಬಗ್ಗೆ ಭಾವುಕರಾದ ಖ್ಯಾತ ಗಾಯಕಿ ಶಮಿತಾ ಮಲ್ನಾಡ್.. ಏನಂದ್ರು?

Share :

Published June 28, 2024 at 6:57pm

    ’ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು, ನ್ಯಾಯ ಎಲ್ಲರಿಗೂ ಒಂದೇ‘ ಎಂದ ಗಾಯಕಿ

    ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ ರೇಣುಕಾಸ್ವಾಮಿ ಕೇಸ್​​

    ರೇಣುಕಾ ಕೊಲೆ ಕೇಸ್​ನಲ್ಲಿ ಈಗಾಗಲೇ ನಟ ದರ್ಶನ್​ ಸೇರಿ 17 ಆರೋಪಿಗಳು ಜೈಲಿಗೆ

ರೇಣುಕಾಸ್ವಾಮಿ ಕೊಲೆ ಕೇಸ್​​ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಸೇರಿ ಒಟ್ಟು 17 ಆರೋಪಿಗಳು ಜೈಲು ಪಾರಾಗಿದ್ದಾರೆ. 17 ಆರೋಪಿಗಳಲ್ಲಿ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಉಳಿದ 3 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕೊಲೆ ಕೇಸ್​ನಲ್ಲಿ ಆರೋಪಿಗಳು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಆದರೆ ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧಗಳ ಬಗ್ಗೆ ಚರ್ಚೆಯಾಘುತ್ತಿವೆ. ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಹಲವಾರು ನಟ ನಟಿಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಎ2 ಆರೋಪಿ ದರ್ಶನ್ ಪರವಾಗಿ ಗಾಯಕಿ, ಸಂಗೀತ ನಿರ್ದೇಶಕಿ ಡಾ ಶಮಿತಾ ಮಲ್ನಾಡ್ ಅವರು ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ, ಶುದ್ಧವಾಗಿ ಬರಲು ಸಮಯ ಬೇಕು ಎಂದು ಫೇಸ್​ ಬುಕ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ದೇವರ ಪೂಜೆಗಾಗಿ ಹೋಗಿದ್ದರು.. ಒಂದು ಕುಟುಂಬದಲ್ಲಿ ಬದುಕಿದ್ದು ಓರ್ವ ಯುವತಿ ಮಾತ್ರ

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡ ಶಮಿತಾ ಮಲ್ನಾಡ್ ಅವರು, ಮನಸೇ ಮನಸೇ.. ಸೋಲೋ ಗೆಲುವೋ.. ನೋವೋ ನಲಿವೋ.. ಏಳೋ ಬೀಳೋ.. ಕಲ್ಲೋ ಮುಳ್ಳೋ.. ಜೀವನದ ಹಾದಿ ಸುಲಭವಲ್ಲ. ಯಶಸ್ಸಿನ ಹಾದಿ ಸುಗಮವಲ್ಲ. ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು ದರ್ಶನ್ ತೂಗುದೀಪ. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು. ಒಳ್ಳೆಯ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡ. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು. ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು. ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು, ತಪ್ಪಾಗಿದ್ದರೆ ನ್ಯಾಯಾಂಗವಿದೆ. ಕಾನೂನಿದೆ ಶಿಕ್ಷೆ ಇದೇ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವ ತೆಗೆಯೋ ಹಕ್ಕು ಯಾರಿಗೂ ಇಲ್ಲ.. ನಟ ದರ್ಶನ್​​ ಬಗ್ಗೆ ಹಿರಿಯ ನಟ ಸುಂದರ್​ ರಾಜ್​ ಬೇಸರ!

ಜೊತೆಗೆ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ನೆರವು, ಆಸರೆ, ನ್ಯಾಯ ಬೇಕಿದೆ. ಹಾಗೇ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ, ಎಲ್ಲರ ಮೇಲೆ ಗೌರವವಿರಲಿ, ಕಾಮೆಂಟ್ಸ್, ಪೋಸ್ಟ್ ಮೇಲೆ ಹಿಡಿತವಿರಲಿ, ದರ್ಶನ್ ಅಣ್ಣಾ, ಕನ್ನಡದ ಕುಟುಂಬ, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ, ಕಲಾವಿದರ ಕುಟುಂಬ, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗಲೂ ಜೊತೆ ಇರುತ್ತೇವೆ, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು. ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು. ನ್ಯಾಯ ಎಲ್ಲರಿಗೂ ಒಂದೇ. ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ ಸಂಕಟವಾಗಿದೆ. ಇದು ಸಂಯಮ,ತಾಳ್ಮೆ, ಪ್ರಾರ್ಥನೆಯ ಸಮಯ. ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು, ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು, ಕಾಯೋಣ ಸಮಾಧಾನದಿಂದ ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ ಅಂತ ಬರೆದುಕೊಂಡು ಪೋಸ್ಟ್​​ ಶೇರ್ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್​​ ಬಗ್ಗೆ ಭಾವುಕರಾದ ಖ್ಯಾತ ಗಾಯಕಿ ಶಮಿತಾ ಮಲ್ನಾಡ್.. ಏನಂದ್ರು?

https://newsfirstlive.com/wp-content/uploads/2024/06/darshan1-2.jpg

Load More