/newsfirstlive-kannada/media/post_attachments/wp-content/uploads/2025/05/Dr-H-C-Mahadevappa.jpg)
ಬೆಂಗಳೂರು: ಪರಿಶಿಷ್ಠ ಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಇಂದಿನಿಂದ ರಾಜ್ಯದಲ್ಲಿ ಮನೆಮನೆ ಗಣತಿ (ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ) ಆರಂಭವಾಗಿದೆ. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗದ ಆ್ಯಪ್ ಮೂಲಕ ಪರಿಶಿಷ್ಟ ಸಮುದಾಯದ ಜನರ ವಿವರ ಸಂಗ್ರಹ ಕಾರ್ಯ ಆರಂಭವಾಗಿದೆ.
ಇದನ್ನೂ ಓದಿ:ಒಳ ಮೀಸಲಾತಿಗಾಗಿ ಮನೆಮನೆ ಗಣತಿ, ಒಟ್ಟು 3 ಹಂತದಲ್ಲಿ ಸರ್ವೇ! CM ಸುದ್ದಿಗೋಷ್ಟಿಯ ಹೈಲೈಟ್ಸ್..!
ಈ ಬೆನ್ನಲ್ಲೇ ಮುಖ್ಯಮಂತ್ರಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಇದೇ ವೇಳೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಾಗಮೋಹನ್ ದಾಸ್ ಸಮೀಕ್ಷೆಗೆ ಸುಮಾರು ನೂರು ಕೋಟಿ ಖರ್ಚಾಗಲಿದೆ ಎಂದಿದ್ದಾರೆ.
ಈ ಬಗ್ಗೆ ಮಾತಾಡಿದ ಅವರು, ರಾಷ್ಟ್ರೀಯ ಸಮೀಕ್ಷೆಯಲ್ಲೂ ಸ್ಪಷ್ಟ ಮಾಹಿತಿ ಇಲ್ಲ. ಕಾಂತರಾಜು ವರದಿಯಲ್ಲೂ ಮಾಹಿತಿ ಇಲ್ಲ. ಹೀಗಾಗಿ ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ದುರುಪಯೋಗ ಆಗಬಾರದು, ಸುಳ್ಳು ಹೇಳಬಾರದು. ಎಡಗೈ, ಬಲಗೈ ಇಬ್ಬರೂ ಎಕೆ, ಎಡಿ ಅಂತಾ ಬರೆದುಕೊಳ್ತಾರೆ. ಎಸ್ ಸಿ ಗುಂಪಿನಲ್ಲಿ ಎಷ್ಟಿದ್ದಾರೆ ಅಂತಾ ಗೊತ್ತಾಗಬೇಕು. ಅದಕ್ಕೆ ಇದನ್ನ ಮಾಡ್ತಿದ್ದೇವೆ ಎಂದಿದ್ದಾರೆ.
ಮೊಬೈಲ್ ಆ್ಯಪ್..!
ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು. ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ