/newsfirstlive-kannada/media/post_attachments/wp-content/uploads/2024/11/SIDDU.jpg)
ಮುಖ್ಯಮಂತ್ರಿ ‘ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ’ದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ಗೆ ದೂರು ಹೋಗಿದೆ.
ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಕಾಂಗ್ರೆಸ್ ಹೊಸ ಹುಮ್ಮಸ್ಸಿನಲ್ಲಿದೆ. ಇದೇ ಖುಷಿಯಲ್ಲಿರುವ ವಿವಿಧ ಪ್ರಗತಿಪರ ಸಂಘಟನೆಗಳು ಡಿಸೆಂಬರ್ 5 ರಂದು ಹಾಸನದಲ್ಲಿ ‘ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ’ ಹಮ್ಮಿಕೊಂಡಿವೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಪತ್ರವೊಂದು ಹೋಗಿದೆ. ಅನಾಮದೇಯ ವ್ಯಕ್ತಿಯೊಬ್ಬರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಹೈಕಮಾಂಡ್ಗೆ ಕೊಟ್ಟ ದೂರಿನಲ್ಲೇನಿದೆ?
ಡಿಸೆಂಬರ್ 5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಅನ್ಯ ಸಂಘಟನೆಗಳ ಹೆಸರಲ್ಲಿ ಸಮಾವೇಶ ಆಯೋಜನೆಗೊಂಡಿದೆ. ಪಕ್ಷದ ಚಿಹ್ನೆಯಡಿ ಕಾರ್ಯಕ್ರಮ ಆಯೋಜನೆ ಮಾಡಲು ಹೇಳಿ. ಇಲ್ಲದಿದ್ದರೆ ಬೇರೆ ನಾಯಕರೂ ತಮ್ಮ ಲಾಭಕ್ಕೆ ಪಕ್ಷ ಬಳಸಿಕೊಳ್ತಾರೆ. ಹೀಗಾದ್ರೆ ಮುಂದೆ ಕಾಂಗ್ರೆಸ್ ಪಕ್ಷದ ಭವಿಷ್ಯ ಏನಾಗಬಹುದು? ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಅಂತ ಎಐಸಿಸಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯ ಪರ ನಡೆಯುತ್ತಿರುವ ಸಮಾವೇಶಕ್ಕೆ ಕೆಲವು ಕಾಂಗ್ರೆಸ್ನ ಹಿರಿಯ ನಾಯಕರಿಂದಲೇ ವಿರೋಧ ಇದೆ ಎನ್ನಲಾಗಿದೆ. ಈ ವಿಚಾರ ರಾಹುಲ್ ಗಾಂಧಿ ಅವರ ಗಮನಕ್ಕೂ ಬಂದಿದೆ. ಆದರೆ ರಾಹುಲ್ ಗಾಂಧಿ ಸಮಾವೇಶಕ್ಕೆ ಸಮ್ಮತಿ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ.
ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಗಾದಿ ರೇಸ್ಗೆ ಮತ್ತೊಬ್ಬ ನಾಯಕನ ಎಂಟ್ರಿ; ಡಿಕೆ ಬ್ರದರ್ಸ್ ದೆಹಲಿ ಭೇಟಿ ಭಾರೀ ಕುತೂಹಲ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ