newsfirstkannada.com

ತಾಯಿ ಕಾಣೆಯಾಗಿದ್ದಾರೆ ಹುಡುಕಿಕೊಡಿ.. HD ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

Share :

Published May 3, 2024 at 9:19am

    ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ

    ತಡರಾತ್ರಿ ತಾಯಿ ಕಾಣೆಯಾಗಿದ್ದಾರೆಂದು ಬಂದು ದೂರು ಕೊಟ್ಟ ಮಗ

    ವ್ಯಕ್ತಿಯೊಬ್ಬರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಮೈಸೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಗನೋರ್ವ ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ದೂರು ಕೊಟ್ಟಿದ್ದಾನೆ. ಈ ಸಂಬಂಧ ಮೈಸೂರು ಜಿಲ್ಲೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ತಡರಾತ್ರಿ ದೂರು ದಾಖಲಾಗಿದ್ದು, ತೀವ್ರ ವಿಚಾರಣೆ ಬಳಿಕ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೂಕ್ಷ್ಮ ಪ್ರಕರಣವಾದ ಕಾರಣ ಅಧಿಕಾರಿಗಳು ಮಾಹಿತಿ ಹೊರಹಾಕಲು ಹಿಂದೇಟು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಪೊಲೀಸರು ಹಲವರ ಬಳಿ ಮಾಹಿತಿ ಕಲೆ ಹಾಕಿದ್ದಾರೆ. ಕೆ.ಆರ್.ನಗರ ತಾಲೂಕಿನ ಹಲವರ ಬಳಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ರೇವಣ್ಣ ಕುಟುಂಬಕ್ಕೆ ಸಂಕಷ್ಟಗಳ ಸರಮಾಲೆ

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರೋ ಹಾಸನದ ಅಶ್ಲೀಕ ವಿಡಿಯೋ​ ಪ್ರಕರಣ ಸದ್ಯ ಕಾನೂನು ಹೋರಾಟದ ಹಾದಿಯಲ್ಲಿದೆ. ವೈರಲ್​ ಪ್ರಪಂಚದಲ್ಲಿ ಹಲ್​ಚಲ್ ಎಬ್ಬಿಸಿದ್ದ ಅಶ್ಲೀಲ ವಿಡಿಯೋಗಳ ಹರಿದಾಟ ರೇವಣ್ಣ ಕುಟುಂಬವನ್ನ ಆಘಾತಕ್ಕೆ ತಳ್ಳಿದೆ. ಪ್ರಕರಣ ದಿನೇ ದಿನೇ ಹೊಸ ಹೊಸ ತಿರುವ ಪಡೆಯುತ್ತಿರೋದು ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ​ಗೆ ಸಂಕಷ್ಟಗಳ ಸರಮಾಲೆಯನ್ನೇ ತಂದೊಡ್ಡಿದೆ.

ಇದನ್ನೂ ಓದಿ: ಹಾಸನ ಪೆನ್​ಡ್ರೈವ್ ಹಂಚಿಕೆ ಆರೋಪದಡಿ ದೇವರಾಜೇಗೌಡ‌ರ ವಿಚಾರಣೆ.. ಪ್ರಜ್ವಲ್​ಗೆ ಎದುರಾಯ್ತು ಮತ್ತೊಂದು ಸಂಕಷ್ಟ 

ಪ್ರಜ್ವಲ್​ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಹಾಸನದ ಹೊಳೆನರಸೀಪುರದಲ್ಲಿ ದಾಖಲಾದ ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಕೇಸ್​ನ ಬೆನ್ನುಬಿದ್ದಿರೋ ಎಸ್​ಐಟಿ ತಂಡದ ಭಯದ ಜೊತೆ ಪ್ರಜ್ವಲ್​ಗೆ ಮತ್ತೊಂದು ಕಂಟಕ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಿಐಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. 376(2), 506, 354(A), 354(B), 354(C) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಅಶ್ಲೀಲ ವಿಡಿಯೋ ಪ್ರಕಣಕ್ಕೆ ಹೊಸ ತಿರುವು ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಾಯಿ ಕಾಣೆಯಾಗಿದ್ದಾರೆ ಹುಡುಕಿಕೊಡಿ.. HD ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

https://newsfirstlive.com/wp-content/uploads/2024/04/dh-revanna.jpg

Load More