/newsfirstlive-kannada/media/post_attachments/wp-content/uploads/2025/04/bank-janardhan8.jpg)
ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಈ ಸುದ್ದಿ ಗೊತ್ತಾಗುತ್ತಿದ್ದಂತೆ, ಸ್ಯಾಂಡಲ್ವುಡ್ ನಟರು, ರಾಜಕೀಯ ನಾಯಕರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಇದನ್ನೂ ಓದಿ: 3 ಬಾರಿ ಹೃದಯಾಘಾತ.. 500ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ವಿಧಿವಶ
ನಟ ಬ್ಯಾಂಕ್ ಜನಾರ್ಧನ್ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರಂತೆ. ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದ್ರೆ ನಿನ್ನೆ ಏಕಾಏಕಿ ಉಸಿರಾಟದ ತೊಂದರೆ ಉಂಟಾಗಿತ್ತು ಎಂದು ಬ್ಯಾಂಕ್ ಜನಾರ್ಧನ್ ಅವರ ಪುತ್ರ ಪ್ರಸಾದ್ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಂದೆಯನ್ನ ಉಳಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡಿದ್ವಿ. ಆದರೂ ಅವರನ್ನ ಉಳಿಸಿಕೊಳ್ಳಲು ಆಗಲಿಲ್ಲ. ನನ್ನ ತಂದೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಮೊದಲಿನಿಂದಲೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸ್ತಿದ್ವಿ. ಕಳೆದ ವಾರ ಡಿಶ್ಚಾರ್ಜ್ ಮಾಡಿ, ಮನೆಗೆ ಕರ್ಕೊಂಡು ಹೋಗಿದ್ವಿ. ಮೂರು ದಿನಗಳಿಂದ ಆರೋಗ್ಯದಲ್ಲಿ ಮತ್ತೇ ಏರುಪೇರು ಆಗಿದೆ. ನಂತರ ಮತ್ತೇ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ವಿ. ನಿನ್ನೆ ತುಂಬಾ ಉಸಿರಾಟದ ಸಮಸ್ಯೆಯಾಗಿತ್ತು. ವೈದ್ಯರು ಕೂಡ ತಂದೆಯನ್ನ ಉಳಿಸಲು ತುಂಬಾ ಪ್ರಯತ್ನ ಪಟ್ಟರು. ಆದ್ರೆ, ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಮಣಿಪಾಲ್ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ಬ್ಯಾಂಕ್ ಜನಾರ್ಧನ್ ಅವರ ಮೃತದೇಹ ನಿವಾಸಕ್ಕೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ