/newsfirstlive-kannada/media/post_attachments/wp-content/uploads/2024/06/sonakshi1.jpg)
ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರ ಜೊತೆ ಮದುವೆಗೆ ಸಜ್ಜಾಗಿದ್ದಾರೆ. ಈಗಾಗಲೇ ವಿವಾಹದ ಕಾರ್ಯಕ್ರಮಗಳು ಆರಂಭವಾಗಿದ್ದು, ಮೆಹೆಂದಿ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
/newsfirstlive-kannada/media/post_attachments/wp-content/uploads/2024/06/sonakshi2.jpg)
ಇನ್ನು, ನಟಿ ಸೋನಾಕ್ಷಿ ಸಿನ್ಹಾ ಅವರು ಮದುವೆಯ ಬಳಿಕ ಜಹೀರ್ ಇಕ್ಬಾಲ್ ಅವರ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎಂಬ ಮಾತುಗಳು ಹರಿದಾಡಿತ್ತು. ಇದೀಗ ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಟ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಜಹೀರ್ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ, ಇದೊಂದು ನಾಗರಿಕ ವಿವಾಹವಾಗಿರುತ್ತದೆ ಎಂದಿದ್ದಾರೆ.
View this post on Instagram
ನಟಿ ಸೋನಾಕ್ಷಿ ಮತ್ತು ಇಕ್ಬಾಲ್ 2022ರಲ್ಲಿ ಬಿಡುಗಡೆಯಾದ 'ಡಬಲ್ ಎಕ್ಸ್‌ಎಲ್' ಚಿತ್ರದಲ್ಲಿ ನಟಿಸಿದ್ದರು. ಅಂದಿನಿಂದ ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಇವರಿಬ್ಬರು ತಮ್ಮ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ದೃಢಪಡಿಸಿಲ್ಲ. ಆದರೆ ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋಗಳು ಹರಿದಾಡುತ್ತಿದ್ದವು. ಆದರೆ ಇದನ್ನು ನೋಡಿದ ಅಭಿಮಾನಿಗಳು ಈ ಇಬ್ಬರು ಲವ್​ ಮಾಡುತ್ತಿದ್ದಾರೆ ಎಂದು ಅಂದುಕೊಂಡಿದ್ದರು. ಇದೀಗ ಆ ಅನುಮಾನ ನಿಜವಾಗಿ ಬಿಟ್ಟಿದೆ. ಮುಂಬೈನ ಬಾಸ್ಟಿಯನ್‌ನಲ್ಲಿ ಸೋನಾಕ್ಷಿ ಮತ್ತು ಜಹೀರ್ ಮದುವೆಯ ಆರತಕ್ಷತೆಯನ್ನು ಆಯೋಜಿಸಲಾಗಿದೆ. ಸೋನಾಕ್ಷಿ ಅವರ ಮದುವೆಗೆ ನಟ ಸಲ್ಮಾನ್ ಖಾನ್, ಹುಮಾ ಖುರೇಷಿ, ಶಾರುಖ್​ ಖಾನ್​ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us