ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

author-image
Ganesh Nachikethu
Updated On
ಸ್ವಂತ ಮನೆಯಿಲ್ಲ, ಸ್ವಂತ ಕಾರು ಇಲ್ಲ.. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಟ್ಟು ಆಸ್ತಿ ಎಷ್ಟು ಗೊತ್ತಾ?
Advertisment
  • ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯ..!
  • ಸರ್ ಗಂಗಾ ರಾಮ್ ಆಸ್ಪತ್ರೆಗೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ
  • ಬೆಳಿಗ್ಗೆ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ

ದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಇವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು, 78 ವರ್ಷದ ಸೋನಿಯಾ ಗಾಂಧಿ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇರಿಸಿದೆ.

ವಯೋಸಹಜ ಆರೋಗ್ಯದ ಸಮಸ್ಯೆಯಿಂದ ಬಳಳುತ್ತಿರೋ ಇವರು ಈ ಹಿಂದೆ ಕೂಡ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಆರೋಗ್ಯ ಸುಧಾರಿಸುತ್ತಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ:6,6,4,4,4,4,4,4,4,4,4; ಭರ್ಜರಿ ಶತಕ ಸಿಡಿಸಿ ಭಾರತವನ್ನು ಗೆಲ್ಲಿಸಿದ ಶುಭ್ಮನ್​ ಗಿಲ್​​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment