ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ.. ಆಸ್ಪತ್ರೆಗೆ ದಾಖಲು

author-image
Bheemappa
Updated On
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ.. ಆಸ್ಪತ್ರೆಗೆ ದಾಖಲು
Advertisment
  • ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋನಿಯಾ ಗಾಂಧಿ
  • ಶ್ರೀಗಂಗಾ ರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಮತ್ತೆ ದಾಖಲು
  • ಕಳೆದ ವಾರವಷ್ಟೇ ಶಿಮ್ಲಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು

ನವದೆಹಲಿ: ಕಾಂಗ್ರೆಸ್​ನ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ (ಜೂ.15)ದಂದು ಸೋನಿಯಾ ಗಾಂಧಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಅವರನ್ನು ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ (Gastroenterology) ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರೀ ಮಳೆ; ರಾಜ್ಯದ ಈ ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

publive-image

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಕಳೆದ ವಾರ ಅಧಿಕ ರಕ್ತದೊತ್ತಡದಿಂದ ಶಿಮ್ಲಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಆಸ್ಪತ್ರೆಗೆ ದಾಖಲು ಆಗಿದ್ದಾರೆ. ಈ ಹಿಂದೆ ಅಂದರೆ ಇದೇ ವರ್ಷದ ಫೆಬ್ರುವರಿಯಲ್ಲಿ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು. ಸದ್ಯ ಸೋನಿಯಾ ಗಾಂಧಿ ಅವರಿಗೆ 78 ವರ್ಷಗಳು ತುಂಬಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment