/newsfirstlive-kannada/media/post_attachments/wp-content/uploads/2025/06/Sonia_Gandhi_Health.jpg)
ನವದೆಹಲಿ: ಕಾಂಗ್ರೆಸ್​ನ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಭಾನುವಾರ (ಜೂ.15)ದಂದು ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲು ಆಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆಸ್ಪತ್ರೆಯವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷರು ಡಾ.ಅಜಯ್ ಸ್ವರೂಪ್ ಅವರು ಮಾತನಾಡಿ, ಭಾನುವಾರ ರಾತ್ರಿ 9 ಗಂಟೆಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲು ಆಗಿದ್ದರು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ (Surgical Gastroenterology)ಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಕೂಡ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅನಾಹುತ.. ಸ್ಥಳದಲ್ಲೇ ಜೀವ ಬಿಟ್ಟ ನಾಲ್ವರು ಮಹಿಳೆಯರು
/newsfirstlive-kannada/media/post_attachments/wp-content/uploads/2025/06/Sonia_Gandhi_Health_1.jpg)
ಇದೇ ಆಸ್ಪತ್ರೆಗೆ ಈ ಹಿಂದೆ ಅಂದರೆ ಜೂನ್ 9 ರಂದು ಮೆಡಿಕಲ್ ಚೆಕಪ್​ಗಾಗಿ ಭೇಟಿ ನೀಡಿದ್ದರು. 78 ವರ್ಷದ ಸೋನಿಯಾ ಗಾಂಧಿ ಅವರು ಕಳೆದ ವಾರ ಅಧಿಕ ರಕ್ತದೊತ್ತಡದಿಂದ ಶಿಮ್ಲಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಆಸ್ಪತ್ರೆಗೆ ದಾಖಲು ಆಗಿದ್ದಾರೆ. ಸದ್ಯ ಆಸ್ಪತ್ರೆಯವರು ಅಧಿಕೃತವಾಗಿ ಮಾಹಿತಿ ನೀಡಿದ್ದು ಸೋನಿಯಾ ಗಾಂಧಿ ಅವರ ಆರೋಗ್ಯ ಉತ್ತಮವಾಗಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us