newsfirstkannada.com

ರಾಯ್​ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ.. ರಾಜ್ಯಸಭೆಗೆ ಸೋನಿಯಾ ಗಾಂಧಿ!

Share :

Published February 13, 2024 at 8:06pm

    ರಾಯ್​ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಕಣಕ್ಕೆ

    ರಾಜ್ಯಸಭೆ ಚುನಾವಣೆಗೆ ಸೋನಿಯಾ ಗಾಂಧಿ ಭಾರೀ ಸಿದ್ಧತೆ

    ಅಮೇಥಿಯಿಂದ ನಿಲ್ಲಲು ರಾಹುಲ್​ ಗಾಂಧಿ ಕೂಡ ತಯಾರಿ!

ದೆಹಲಿ: ಸಕ್ರಿಯ ರಾಜಕೀಯ ಪ್ರವೇಶ ಮಾಡಿದ ಬರೋಬ್ಬರಿ 5 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಲೋಕಸಭಾ ಚುನಾವಣೆಗೆ ನಿಲ್ಲಲಿದ್ದಾರೆ ಎನ್ನಲಾಗಿದೆ. ತಾಯಿ ಸೋನಿಯಾ ಗಾಂಧಿ ದಶಕಗಳಿಂದ ಪ್ರತಿನಿಧಿಸುತ್ತಿರೋ ಉತ್ತರ ಪ್ರದೇಶದ ರಾಯ್ ಬರೇಲಿಯಿಂದಲೇ ಕಣಕ್ಕಿಳಿಯಲಿದ್ದಾರೆ ಎನ್ನುತ್ತಿವೆ ಮೂಲಗಳು.

ಇನ್ನು, ಪ್ರಿಯಾಂಕಾ ಗಾಂಧಿ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿರೋ ಸೋನಿಯಾ ಗಾಂಧಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಫೆ. 27ಕ್ಕೆ ನಡೆಯುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದಲೇ ಸೋನಿಯಾ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​​ ಬಲಪಡಿಸಲು ನಿರ್ಧಾರ!

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​​ ನಿರಾಶಾದಾಯಕ ಸ್ಥಿತಿಯಲ್ಲಿದೆ. ಹೀಗಾಗಿ ಕಾಂಗ್ರೆಸ್​ ಪಕ್ಷ ಸಂಘಟನೆಗಾಗಿ ಪ್ರಿಯಾಂಕಾ ಗಾಂಧಿ ರಾಯ್​ ಬರೇಲಿಯಿಂದಲೇ ಸ್ಪರ್ಧೆ ಮಾಡಬೇಕು. ಅಷ್ಟೇ ಅಲ್ಲ ರಾಹುಲ್​ ಗಾಂಧಿ ಕೂಡ ವಯನಾಡ್ ಜತೆಗೆ ಅಮೇಥಿಯಿಂದ ಚುನಾವಣೆಗೆ ನಿಲ್ಲಬೇಕು. ಕೇಂದ್ರ ಸಚಿವೆ ಸ್ಮೃತಿ ಇರಾನಿ ಕ್ಷೇತ್ರದ ಬಗ್ಗೆ ನಿರಾಸಕ್ತಿ ತೋರಿದ ಕಾರಣ ಜನ ರಾಹುಲ್​ ಗಾಂಧಿ ನಿಲ್ಲಲಿ ಎಂದು ಕೇಳುತ್ತಿದ್ದಾರೆ ಅನ್ನೋ ಬಲವಾದ ಅಭಿಪ್ರಾಯಗಳು ಕೇಳಿ ಬಂದಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಯ್​ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ.. ರಾಜ್ಯಸಭೆಗೆ ಸೋನಿಯಾ ಗಾಂಧಿ!

https://newsfirstlive.com/wp-content/uploads/2024/02/Sonia-Gandhi.jpg

Load More