newsfirstkannada.com

Breaking News: ಬಿಗ್​ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್

Share :

Published March 22, 2024 at 10:25am

Update March 22, 2024 at 10:28am

    ಬ್ಯಾಡರಳ್ಳಿ ಠಾಣೆ ಪೊಲೀಸರಿಂದ ಸೋನುಗೌಡ ಬಂಧನ

    ಮಗು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘನೆ ಹಿನ್ನೆಲೆ

    ಚೈಲ್ಡ್​ ವೆಲ್ಫೆರ್ ಕಮಿಟಿ ದೂರು ಹಿನ್ನೆಲೆಯಲ್ಲಿ ಬಂಧನ ಮಾಡಲಾಗಿದೆ

8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪದ ಮೇಲೆ ಸೋಶಿಯಲ್​ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್​ ಗೌಡ ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಮಾಡಿರುವ ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ.

ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ದತ್ತು ಪಡೆದುಕೊಂಡಿದ್ದಾರೆ. ಹೀಗಾಗಿ ಮಗುವನ್ನ ಕರೆ ತಂದು ತನ್ನ ಜೊತೆ ಇಟ್ಟುಕೊಂಡಿದ್ದರು. ಈ ವೇಳೆ ಕಾನೂನು ಉಲ್ಲಂಘಿಸಿರುವ ಆರೋಪ ಇರುವುದರಿಂದ ಸೋನುಗೌಡ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿಕಾನೂನು ಉಲ್ಲಂಘಿಸಿ ಮಗು ದತ್ತು ಪಡೆದ ಆರೋಪ; ಸೋನುಗೌಡ ವಿರುದ್ಧ ಕೇಸ್​

ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ. ಅಲ್ಲದೇ ಮಗುವಿನ ತಂದೆ ತಾಯಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ.

ಏನ್ ಹೇಳಿದ್ದರು ಸೋನು ಗೌಡ..?

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸೋನು ಗೌಡ ಮಗು ದತ್ತು ಪಡೆದುಕೊಂಡಿರುವ ಬಗ್ಗೆ ಹೇಳಿಕೊಂಡಿದ್ದರು. ಮೂರು ತಿಂಗಳಿಂದ ನನ್ನ ಬಗ್ಗೆ ಪಾಸಿಟಿವ್ ಆಗಿ ಎಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಹುಶಃ ಇವಳನ್ನು ದತ್ತು ತೆಗೆದುಕೊಂಡಿದ್ದಕ್ಕೋ ಏನೋ, ನನಗೆ ಸರಿಯಾಗಿ ಗೊತ್ತಿಲ್ಲ. ನಾನು ಅಪಾರ್ಟ್​ಮೆಂಟ್​ನಲ್ಲಿ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ನಾನು ಮೊದಲು ಚಾಕೋಲೇಟ್ ಕೊಡಿಸಿದ್ದೆ. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ. ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದ್ದೇನೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ ಎಂದು ಸೋನು ಹೇಳಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಬಿಗ್​ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್

https://newsfirstlive.com/wp-content/uploads/2024/03/SONU-GOWDA.jpg

Load More