/newsfirstlive-kannada/media/post_attachments/wp-content/uploads/2025/01/GANGULY-DAUTHER.jpg)
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಪುತ್ರಿ ಸನಾ ಅಪಘಾತಕ್ಕೀಡಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಶುಕ್ರವಾರ ರಾತ್ರಿ ಕೋಲ್ಕತ್ತಾದ ಡೈಮಂಡ್ ಹಾರ್ಬರ್​ನಲ್ಲಿ ಈ ದುರ್ಘನೆ ನಡೆದಿದೆ.
ಏನಾಯಿತು..?
ಕೋಲ್ಕತ್ತಾದಿಂದ ರಾಯಚಕ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಸ್ ಗುದ್ದಿಕೊಂಡು ಹೋಗಿದೆ. ಸನಾ ಅವರು ಕಾರು ಚಲಾಯಿಸುತ್ತಿರಲಿಲ್ಲ. ಬದಲಾಗಿ ಡ್ರೈವರ್ ಕಾರು ಚಲಾಯಿಸುತ್ತಿದ್ದರು. ಕೊನೆಗೆ ಕಾರು ಡ್ರೈವರ್​, ಬಸ್ ಚೇಸ್ ಮಾಡಿ ಬಸ್ ನಿಲ್ಲಿಸಿದ್ದಾನೆ.
ಇದನ್ನೂ ಓದಿ:‘ನನ್ನ ನಿರ್ಧಾರ ಏನೆಂದರೆ..’ ಕೊನೆಗೂ ಉತ್ತರ ಕೊಟ್ಟ ಕ್ಯಾಪ್ಟನ್ ರೋಹಿತ್ ಶರ್ಮಾ
ಬಳಿಕ ಸನಾ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುರ್ಘಟನೆಯಲ್ಲಿ ಸನಾ ಗಂಗೂಲಿ ಕಾರಿಗೆ ಸ್ವಲ್ಪ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವರಿಗೆ ಯಾವುದೇ ಗಾಯವಾಗಿಲ್ಲ. ಆದರೆ ಅಪಘಾತ ವಿರುದ್ಧ ಸನಾ ಗಂಗೂಲಿ ಕೇಸ್ ದಾಖಲಿಸಿಲ್ಲ. ಕೇವಲ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ರೋಚಕತೆ ಹೆಚ್ಚಿಸಿದ ಸಿಡ್ನಿ ಟೆಸ್ಟ್; ಆಸ್ಟ್ರೇಲಿಯಾ ಇನ್ನಿಂಗ್ಸ್​ ಫಿನಿಶ್, ಟೀ ಇಂಡಿಯಾ ಮೇಲುಗೈ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us