/newsfirstlive-kannada/media/post_attachments/wp-content/uploads/2024/09/Goutham-Gambhir.jpg)
ಭಾರತ ಮತ್ತು ನ್ಯೂಜಿಲೆಂಡ್ ಟೆಸ್ಟ್ ಮುಗಿಯುತ್ತಿದ್ದಂತೆಯೇ ಮುಖ್ಯ ಕೋಚ್ ಗೌತಮ್ ಗಂಭೀರ್ ರಜೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುವ ಟಿ-20 ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗಿರುವುದಿಲ್ಲ ಎಂಬ ಮಾಹಿತಿ ಹೊರ ಬಿದ್ದಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು ಒಟ್ಟು 4 ಟಿ-20 ಪಂದ್ಯಗಳನ್ನು ಆಡಲಿದೆ. ನವೆಂಬರ್ 8 ರಿಂದ ಟಿ20 ಪಂದ್ಯಗಳು ನಡೆಯಲಿವೆ. ಈ ಸರಣಿಗೆ ಗೌತಮ್ ಗಂಭೀರ್, ಕೋಚ್ ಆಗಿ ಕಾರ್ಯನಿರ್ವಹಿಸುವುದಿಲ್ಲ. ಅವರ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರು ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.
ಯಾಕೆ ಗಂಭೀರ್ ವಿಶ್ರಾಂತಿ..!
ನವೆಂಬರ್ 26 ರಿಂದ ಬಾರ್ಡರ್ ಗವಾಸ್ಕರ್ ಟೂರ್ನಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. 4 ಟೆಸ್ಟ್ ಪಂದ್ಯಗಳ ಸರಣಿಯು ಟೀಂ ಇಂಡಿಯಾಗೆ ತುಂಬಾನೇ ಮುಖ್ಯವಾಗಿದೆ. ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯವನ್ನು ಭಾರತ ಸೋತಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಎಲ್ಲಾ ಟೆಸ್ಟ್ಗಳನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ. ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಭಾಗವಹಿಸಬಹುದು.
ಇದನ್ನೂ ಓದಿ:WTC ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಕುಸಿತ.. ರೋಹಿತ್ ಪಡೆಗೆ ಫೈನಲ್ ಮತ್ತಷ್ಟು ಕಷ್ಟ.. ಕಷ್ಟ!
ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯಕುಮಾರ್ ವಿಶಾಕ್, ಅವೇಶ್ ಖಾನ್ ಯಶ್ ದಯಾಳ್.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್