newsfirstkannada.com

‘ತಾಯಿ ಹೃದಯದ ಕುಮಾರಸ್ವಾಮಿ ಹೃದಯ ಚಿಕಿತ್ಸೆ ಯಶಸ್ವಿಯಾಗಲಿ’- ದೇವರ ಮೊರೆ ಹೋದ ಅಭಿಮಾನಿಗಳು

Share :

Published March 20, 2024 at 2:22pm

Update March 20, 2024 at 2:24pm

  ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಹೆಚ್.ಡಿ ಕುಮಾರಸ್ವಾಮಿ

  ಬಸವನಗುಡಿ ದೊಡ್ಡಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

  108 ತೆಂಗಿನಕಾಯಿ ಹೊಡೆದು ದೇವರಿಗೆ ಪೂಜೆ ಸಲ್ಲಿಸಿದ್ದೇವೆ- ಟಿ.ಎ ಶರವಣ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಳೆ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಮೂರನೇ ಬಾರಿ ಕುಮಾರಸ್ವಾಮಿ ಅವರಿಗೆ ಹಾರ್ಟ್ ಆಪರೇಷನ್ ನಡೆಯುತ್ತಾ ಇದ್ದು, ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನಾಳೆ ನಡೆಯಲಿರುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯಕ್ಕಾಗಿ ವಿಧಾನಪರಿಷತ್ ಸದಸ್ಯ ಟಿಎ ಶರವಣ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಹೆಚ್.ಡಿ. ಕುಮಾರಸ್ವಾಮಿ ಬೇಗನೇ ಗುಣಮುಖರಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಚುನಾವಣಾ ಅಖಾಡದಲ್ಲಿ ಸ್ವರಾಜ್ ಕುಟುಂಬದ ಕುಡಿ; ಕಾನೂನು ಪಾಂಡಿತ್ಯ ಹೊಂದಿರೋ ಬಾನ್ಸುರಿ ಯಾರು..?

ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ಎಂಎಲ್‌ಸಿ ಶರವಣ ಅವರು, ಕುಮಾರಸ್ವಾಮಿಯವರಿಗೆ ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ತಾಯಿ ಹೃದಯದ ಹೆಚ್‌.ಡಿ ಕುಮಾರಸ್ವಾಮಿಯವರ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಮೂರನೇ ಬಾರಿಗೆ ನಡೆಯುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಅವರಿಗೆ ಉತ್ತಮ ಆರೋಗ್ಯಕ್ಕಾಗಿ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿದ್ದೇವೆ. 108 ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ತಾಯಿ ಹೃದಯದ ಕುಮಾರಸ್ವಾಮಿ ಹೃದಯ ಚಿಕಿತ್ಸೆ ಯಶಸ್ವಿಯಾಗಲಿ’- ದೇವರ ಮೊರೆ ಹೋದ ಅಭಿಮಾನಿಗಳು

https://newsfirstlive.com/wp-content/uploads/2024/03/ta-shanarvana.jpg

Load More