newsfirstkannada.com

ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ; ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ

Share :

12-11-2023

    ನವೆಂಬರ್​15ಕ್ಕೆ ಬಿ.ವೈ ವಿಜಯೇಂದ್ರ ಪದಗ್ರಹಣಕ್ಕೆ ಮುಹೂರ್ತ

    ನೂತನ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಲು ಅಭಿಮಾನಿಗಳ ದಂಡು ಆಗಮನ

    ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ವಿಜಯೇಂದ್ರ ಭೇಟಿ

ಬೆಂಗಳೂರು: ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನವೆಂಬರ್ 15ಕ್ಕೆ ಪದಗ್ರಹಣ ಮಾಡಲಿದ್ದಾರೆ. ನವೆಂಬರ್​ 15ರ ಬೆಳಗ್ಗೆ 10 ಗಂಟೆಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ದೊಡ್ಡ ಅರಮನೆ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ಪದಗ್ರಹಣಕ್ಕೆ ಸಜ್ಜಾಗುತ್ತಿರುವ ಬಿ.ವೈ. ವಿಜಯೇಂದ್ರ ಅವರು ಇಂದು ತಮ್ಮ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಬಿ.ವೈ ವಿಜಯೇಂದ್ರ ಅವರು ಕುಟುಂಬ ಸಮೇತರಾಗಿ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೂ ಬಿ.ವೈ ವಿಜಯೇಂದ್ರ ಅವರು ಭೇಟಿ ಕೊಟ್ಟಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ವಿಜಯೇಂದ್ರ ಅವರು ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಸಿದ್ದಲಿಂಗಾ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಇದಾದ ನಂತರ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಭೇಟಿ ಕೊಟ್ಟು ಆರ್ಶೀವಾದ ಪಡೆದುಕೊಂಡಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಈ ಪ್ರವಾಸದ ವೇಳೆ ವಿಜಯೇಂದ್ರ ಅವರನ್ನ ಸ್ವಾಗತಿಸಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ; ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ

https://newsfirstlive.com/wp-content/uploads/2023/11/bjp-2.jpg

Load More