/newsfirstlive-kannada/media/media_files/2025/12/10/ksca-prez-venkatesh-prasad-met-dks-2025-12-10-18-47-55.jpg)
ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಐಪಿಎಲ್ ಪಂದ್ಯ ನಡೆಸಲು ತೀರ್ಮಾನ
ಕ್ರಿಕೆಟ್​ ಅಭಿಮಾನಿಗಳಿಗೆ ಕೆಎಸ್​ಸಿಎನಿಂದ ಗುಡ್​​ನ್ಯೂಸ್​​ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆ ಬಗ್ಗೆ ಇದ್ದ ಗೊಂದಲಗಳಿಗೆ ಕೆಎಸ್‌ಸಿಎ ತೆರೆ ಎಳೆದಿದೆ .
ಚಿನ್ನಸ್ವಾಮಿ ಮೈದಾನದಲ್ಲೇ ಐಪಿಎಲ್​ ಟೂರ್ನಿ ಆಯೋಜನೆ ಮಾಡಲಾಗುತ್ತೆ. RCBಯ ತವರಿನ ಎಲ್ಲಾ ಪಂದ್ಯಗಳು ಚಿನ್ನಸ್ವಾಮಿಯಲ್ಲಿ ನಡೆಯಲಿವೆ. ಆರ್‌ಸಿಬಿ ಪಂದ್ಯ ಸೇರಿದಂತೆ ಐಪಿಎಲ್ ಪಂದ್ಯ ಆಯೋಜನೆ ಕುರಿತಂತೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.
IPL ಉದ್ಘಾಟನಾ ಪಂದ್ಯ ಸೇರಿ ಎಲ್ಲಾ ಪಂದ್ಯ ಆಯೋಜನೆ ಮಾಡಲಾಗುತ್ತೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಮಾರ್ಚ್ ತಿಂಗಳ ಅಂತ್ಯದಲ್ಲಿ ಐಪಿಎಲ್ ಪಂದ್ಯಗಳು ಶುರುವಾಗಲಿವೆ. ಉದ್ಘಾಟನಾ ಪಂದ್ಯವನ್ನು ಗೆದ್ದ ತಂಡದ ತವರು ಸ್ಟೇಡಿಯಂನಲ್ಲಿ ನಡೆಸುವುದು ವಾಡಿಕೆ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಆಯೋಜನೆ ಮಾಡಲಾಗುತ್ತೆ
/filters:format(webp)/newsfirstlive-kannada/media/media_files/2025/12/10/ksca-prez-venkatesh-prasad-met-cm-2025-12-10-18-46-53.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us