/newsfirstlive-kannada/media/media_files/2025/10/22/kl-rahul-7-2025-10-22-11-32-02.jpg)
ಟೀಮ್ ಇಂಡಿಯಾ ಜೊತೆಗಿನ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡ ಆಸ್ಟ್ರೇಲಿಯಾ ಕ್ಯಾಪ್ಟನ್ ಮಿಚೆಲ್ ಮಾರ್ಷ್​ ಬೌಲಿಂಗ್​ ಆಯ್ಕೆ ಮಾಡಿದ್ದಾರೆ. ಇದರಿಂದ ಗಿಲ್ ನೇತೃತ್ವದ ಟೀಮ್ ಇಂಡಿಯಾ ಮೊದಲ ಬ್ಯಾಟಿಂಗ್ ಮಾಡಲಿದೆ.
ಆಸ್ಟ್ರೇಲಿಯಾದ ಅಡಿಲೇಡ್ ಓವಲ್​ ಮೈದಾನದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಆಸಿಸ್​ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದು ಟೀಮ್ ಇಂಡಿಯಾ ಮೊದಲ ಬ್ಯಾಟಿಂಗ್ ಮಾಡಲಿದೆ. ಹೀಗಾಗಿ ಭಾರತದ ಪರ ಓಪನರ್ ಆಗಿ ರೋಹಿತ್ ಶರ್ಮಾ, ನಾಯಕ ಗಿಲ್ ಕ್ರೀಸ್​ಗೆ ಆಗಮಿಸಲಿದ್ದಾರೆ. ವಿರಾಟ್ ಕೊಹ್ಲಿ ಅವರು ಮೂರನೇ ಬ್ಯಾಟರ್ ಆಗಿ ಕ್ರೀಸ್​ ಆಗಮಿಸಲಿದ್ದಾರೆ. ಕಳೆದ ಪಂದ್ಯದಲ್ಲಿ ಮಾಡಿದ ತಪ್ಪನ್ನು ಮರುಕಳಿಸದಂತೆ ಅನುಭವಿ ಬ್ಯಾಟರ್ಸ್​ ಬ್ಯಾಟ್​ ಬೀಸಬೇಕಿದೆ.
/filters:format(webp)/newsfirstlive-kannada/media/media_files/2025/08/21/kl_rahul_shreyas_iyer-1-2025-08-21-10-38-56.jpg)
ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಟೀಮ್​ಗೆ ಆಸರೆ ಆಗಬೇಕಿದೆ. ಕೊಟ್ಟ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಕನ್ನಡಿಗ ಕೆ.ಎಲ್ ರಾಹುಲ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಕಳೆದ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಅಯ್ಯರ್ ಹಾಗೂ ರಾಹುಲ್ ಪಾತ್ರ ಮುಖ್ಯವಾಗಿದೆ.
ಆಲ್​ರೌಂಡರ್​ಗಳಾಗಿ ಮೂವರು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಅಕ್ಷರ್ ಪಟೇಲ್ ಆಲ್​ರೌಂಡರ್​ಗಳಾಗಿ ಕಣದಲ್ಲಿ ಇದ್ದಾರೆ. ಬೌಲಿಂಗ್ ಪಡೆ ಮೊಹಮ್ಮದ್ ಸಿರಾಜ್ ನೇತೃತ್ವದಲ್ಲಿ ಶಕ್ತಿಯುತವಾಗಿದೆ. ಇದಕ್ಕೆ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ನಿರ್ಣಾಯಕ ಬೌಲಿಂಗ್ ಪ್ರದರ್ಶನ ಮಾಡಬೇಕಿದೆ.
ಟೀಮ್ ಇಂಡಿಯಾದ ಪ್ಲೇಯಿಂಗ್-11
ರೋಹಿತ್ ಶರ್ಮಾ, ಶುಭಮನ್ ಗಿಲ್ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us