/newsfirstlive-kannada/media/media_files/2026/01/04/mustafizur-rahman-2026-01-04-15-56-28.jpg)
ಟಿ-20 ವಿಶ್ವಕಪ್​ ಫೆಬ್ರವರಿಯಿಂದ ಆರಂಭವಾಗಲಿದ್ದು, ಭಾರತದಲ್ಲೂ ಪಂದ್ಯಗಳು ಆಯೋಜನೆಗೊಂಡಿವೆ. ಆದರೆ ಬಾಂಗ್ಲಾದೇಶ ತಂಡವು ಟಿ-20 ವಿಶ್ವಕಪ್ ಆಡಲು ಭಾರತಕ್ಕೆ ಬರೋದಿಲ್ಲ ಎಂದು ಬಾಂಗ್ಲಾ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ತಿಳಿಸಿದ್ದಾರೆ.
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ಟಿ-20 ಪಂದ್ಯಗಳ ಆಯೋಜನೆ ಸಂಬಂಧ ಐಸಿಸಿಸಿ ವೇಳಾಪಟ್ಟಿ ಸಿದ್ಧಪಡಿಸುತ್ತಿದೆ. ಬಾಂಗ್ಲಾದೇಶದ ಈ ನಿರ್ಧಾರದಿಂದ ಐಸಿಸಿ ಯಾವ ಕ್ರಮ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಇದನ್ನೂ ಓದಿ:ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಿನ್ನಲೆ: ಮುಸ್ತಾಫಿಜೂರ್ ರೆಹಮಾನ್ ಐಪಿಎಲ್ ನಿಂದ ಔಟ್!
/filters:format(webp)/newsfirstlive-kannada/media/media_files/2026/01/03/cricketer-mustafizur-rehaman-out-of-ipl-2026-01-03-11-59-33.jpg)
ವಿಶ್ವಕಪ್‌ಗಾಗಿ ಬಾಂಗ್ಲಾದೇಶ ಭಾರತಕ್ಕೆ ಪ್ರಯಾಣಿಸಲ್ಲ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇಂದು (ಜನವರಿ 4) ಈ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್ ಮಂಡಳಿಯು ಮುಸ್ತಾಫಿಜುರ್ ರೆಹಮಾನ್ ವಿರುದ್ಧ ತೆಗೆದುಕೊಂಡ ಕ್ರಮವನ್ನು ಸ್ವಾಗತಿಸುತ್ತೇವೆ ಎಂದು ಆಸಿಫ್ ನಜ್ರುಲ್ ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಸಿಸಿಐ ಹೊರಗಿಟ್ಟ ನಂತರ ಬಿಸಿಬಿ ಈ ನಿರ್ಧಾರ ತೆಗೆದುಕೊಂಡಿದೆ. ಬಿಸಿಸಿಐ ಕೋಲ್ಕತ್ತಾ ನೈಟ್ ರೈಡರ್ಸ್​ಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ. ಕೆಕೆಆರ್ ಬಿಸಿಸಿಐ ನಿರ್ದೇಶನವನ್ನು ಪಾಲಿಸಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ:Super six: ಮಿಂಚಿದ ಶ್ರೇಯಾಂಕ ಪಾಟೀಲ್, ಗಿಲ್ ದಿಢೀರ್ ಭೇಟಿಯಾಗಿದ್ದು ಯಾರನ್ನ..?
ಕಳೆದ ತಿಂಗಳ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು 9.20 ಕೋಟಿಗೆ ಖರೀದಿಸಿತು. ಭಾರತದ ಕೆಲವು ಧಾರ್ಮಿಕ ಮತ್ತು ರಾಜಕೀಯ ಸಂಘಟನೆಗಳು ಬಾಂಗ್ಲಾದೇಶಿ ಆಟಗಾರನ ಐಪಿಎಲ್ ಭಾಗವಹಿಸುವಿಕೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದ ನಂತರ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಶುಕ್ರವಾರ 2026ರ ತನ್ನ ತವರು ಅಂತರರಾಷ್ಟ್ರೀಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಭಾರತದ ವಿರುದ್ಧದ ಸೀಮಿತ ಓವರ್‌ಗಳ ಸರಣಿಯೂ ಸೇರಿದೆ. 2026ರ ಟಿ 20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಪಂದ್ಯಗಳನ್ನು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿ ಪ್ರಕಾರ, ತಂಡವು ಫೆಬ್ರವರಿ 7 ರಂದು ಈಡನ್ ಗಾರ್ಡನ್ಸ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ. ಪ್ರಸ್ತುತ ಪರಿಸ್ಥಿತಿ ಗಮನಿಸಿದರೆ ಈ ಪಂದ್ಯಗಳ ಸ್ಥಳದ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. ವಿಶ್ವಕಪ್​ನಲ್ಲಿ ಗುಂಪು ಹಂತದಲ್ಲಿ ಬಾಂಗ್ಲಾದೇಶದ ನಾಲ್ಕು ಪಂದ್ಯಗಳು ಭಾರತದಲ್ಲೇ ಆಯೋಜನೆಗೊಂಡಿದೆ. ಅದರಲ್ಲಿ ಮೂರು ಪಂದ್ಯಗಳು ಕೋಲ್ಕತ್ತದ ಈಡನ್ ಗಾರ್ಡನ್​​ನಲ್ಲಿ ನಡೆದ್ರೆ, ಇನ್ನೊಂದು ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದನ್ನೂ ಓದಿ:ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಿನ್ನಲೆ: ಮುಸ್ತಾಫಿಜೂರ್ ರೆಹಮಾನ್ ಐಪಿಎಲ್ ನಿಂದ ಔಟ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us