/newsfirstlive-kannada/media/media_files/2025/11/03/indian-women-team-won-world-cup-2025-11-03-12-33-50.jpg)
ಮಹಿಳಾ ವಿಶ್ವಕಪ್ ಗೆದ್ದ ಭಾರತದ ಮಹಿಳಾ ಕ್ರಿಕೆಟ್ ತಂಡ
ಭಾರತದ ಮಹಿಳಾ ಕ್ರಿಕೆಟ್ ಗೆ ನಿನ್ನೆ ಐತಿಹಾಸಿಕ ದಿನ. ಭಾರತದ ಮಹಿಳಾ ಕ್ರಿಕೆಟ್ ತಂಡ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ವರ್ಲ್ಡ್ ಕಪ್ ಗೆದ್ದಿದೆ. ಇದನ್ನು 1983 ರಲ್ಲಿ ಕಪಿಲ್ ದೇವ್ ನಾಯಕತ್ವದ ತಂಡ ವರ್ಲ್ಡ್ ಕಪ್ ಗೆದ್ದಿದ್ದಕ್ಕೆ ಹೋಲಿಕೆ ಮಾಡಲಾಗುತ್ತಿದೆ. ದೇಶಾದ್ಯಂತ ಜನರು ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದನ್ನು ಸಂಭ್ರಮಿಸುತ್ತಿದ್ದಾರೆ.
ಮಹಿಳಾ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿ ಬರೋಬ್ಬರಿ 40 ಕೋಟಿ ರೂಪಾಯಿ ಬಹುಮಾನದ ಹಣ ನೀಡಲಿದೆ.
ಈಗ ಬಿಸಿಸಿಐ ನಿಂದಲೂ ವರ್ಲ್ಡ್ ಚಾಂಪಿಯನ್ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ ಘೋಷಣೆಯಾಗಿದೆ. ಬಿಸಿಸಿಐ ನಿಂದ ಸೆಕ್ರೆಟರಿ ದೇವಜಿತ್ ಸೈಕಿಯಾ ಮಹಿಳಾ ಕ್ರಿಕೆಟ್ ತಂಡಕ್ಕೆ ಬರೋಬ್ಬರಿ 51 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಆಟಗಾರರು ಮತ್ತು ಸಪೋರ್ಟ್ ಸ್ಟಾಫ್ ಗೆ 51 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿಶ್ವಕಪ್ ಗೆಲುವು ಐತಿಹಾಸಿಕ ಸಾಧನೆ, ಇದರಿಂದಾಗಿ ಭಾರತದ ಮಹಿಳಾ ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ದೇವಜಿತ್ ಸೈಕಿಯಾ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us