/newsfirstlive-kannada/media/media_files/2025/09/23/kl_rahul_gill-2025-09-23-15-24-32.jpg)
ವೆಸ್ಟ್​ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಶುಬ್ಮನ್ ಗಿಲ್ ನಾಯಕತ್ವದಲ್ಲಿ 15 ಆಟಗಾರರ ಹೆಸರನ್ನು ಬಿಸಿಸಿಐ ಪ್ರಕಟಿಸಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ರವೀಂದ್ರ ಜಡೇಜಾರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.
ತಂಡಕ್ಕೆ ರಿಷಬ್ ಪಂತ್ ಕಂಬ್ಯಾಕ್ ಮಾಡಿಲ್ಲ. ಮೂವರು ಕರ್ನಾಟಕದ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಕೆಎಲ್ ರಾಹುಲ್, ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ದೇವದತ್ ಪಡಿಕ್ಕಲ್ ವೆಸ್ಟ್ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಇದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ.. ತಲ್ವಾರ್ ಹಿಡಿದು ವಿಕೃತಿ
ಟೀಂ ಇಂಡಿಯಾ: ಶುಬ್ಮನ್ ಗಿಲ್ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್​ ಜಗದೀಶನ್ (ವಿಕೆಟ್ ಕೀಪರ್), ಮೊಹ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್.
ಭಾರತ ತಂಡವು ವೆಸ್ಟ್ ವಿಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನ ಆಡಲಿದೆ. ಮೊದಲ ಪಂದ್ಯವು ಅಕ್ಟೋಬರ್ 2 ರಂದು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಕೆಎಲ್ ರಾಹುಲ್​ಗೆ ಸ್ಥಾನ, ಸಂಕಷ್ಟಕ್ಕೆ ಸಿಲುಕಿದ ಮನೀಷ್ ಪಾಂಡೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.