/newsfirstlive-kannada/media/media_files/2025/08/28/rcb-cares-2025-08-28-15-27-04.jpg)
ಚಿನ್ನಸ್ವಾಮಿ ಮೈದಾನದ ಬಳಿ ಕಾಲ್ತುಳಿತ ಸಂಭವಿಸಿ ಘೋರ ದುರಂತ ನಡೆದು ಮೂರು ತಿಂಗಳು ಕಳೆದಿವೆ. ಇದೀಗ ಆರ್‌ಸಿಬಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಗುಡ್ನ್ಯೂಸ್ ಒಂದನ್ನ ನೀಡಿದೆ.
ಇದನ್ನೂ ಓದಿ:ಕೊಹ್ಲಿ ಮಾಡಿದ ಒಂದು ಯಡವಟ್ಟು.. ಈಕೆಯ ಅದೃಷ್ಟವೇ ಬದಲಾಗಿದೆ ನೋಡಿ
ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ನೊಂದಿಗೆ ಖುಷಿ ವಿಚಾರ ಹಂಚಿಕೊಂಡಿದೆ. ಅಭಿಮಾನಿಗಳಿಗಾಗಿ ‘ಆರ್‌ಸಿಬಿ ಕೇರ್ಸ್’ ಎಂಬ ಯೋಜನೆಯನ್ನ ಸೃಷ್ಟಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನ ಶೀಘ್ರದಲ್ಲೇ ನೀಡಲಾಗುವುದು ಎಂದು ಹೇಳಿದೆ.
ಆರ್‌ಸಿಬಿ ಪೋಸ್ಟ್ನಲ್ಲಿ ಏನಿದೆ..?
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ.
ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ.
ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.
ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ.
ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು.
ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.
ಅದರ ಫಲವೇ ಆರ್‌ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.
ಇಂದು ನಾವು ಮರಳಿದ್ದೇವೆ;
ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.
ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.
ಹೆಚ್ಚಿನ ಮಾಹಿತಿ... ಶೀಘ್ರದಲ್ಲೇ.
ಸುದೀರ್ಘ 18 ವರ್ಷಗಳ ಕಾಯುವಿಕೆಯ ನಂತರ ಆರ್‌ಸಿಬಿ 2025ರಲ್ಲಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಭ್ರಮಾಚರಣೆ ಹಮ್ಮಿಕೊಂಡಿತ್ತು. ಈ ವೇಳೆ ಲಕ್ಷಾಂತರ ಜನ ಸ್ಟೇಡಿಯಂನತ್ತ ಆಗಿಮಿಸಿದ ಪರಿಣಾಮ ಘೋರ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡು 56ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ 5ನೇ ತಾರೀಕಿನಂದು ವಿಷಾದ ವ್ಯಕ್ತಪಡಿಸಿ ಮೃತರ ಕುಟುಂಬಗಳಿಗೆ ತಲಾ 10ಲಕ್ಷ ಪರಿಹಾರವನ್ನೂ ಘೋಷಿಸಿತ್ತು. ಇದನ್ನು ಬಿಟ್ಟರೆ ಕಳೆದ 86 ದಿನಗಳಿಂದ ಅಂದರೆ ಸುಮಾರು 3 ತಿಂಗಳಿಂದ ಆರ್‌ಸಿಬಿ ಯಾವುದೇ ಅಪ್ಡೇಟ್ಸ್ ನೀಡಿರಲಿಲ್ಲ.
ಇದನ್ನೂ ಓದಿ: ರೋಹಿತ್ ಶರ್ಮಾರ ಹೊರದಬ್ಬಲು BCCI ಮಾಸ್ಟರ್ ಪ್ಲಾನ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ