/newsfirstlive-kannada/media/media_files/2025/12/10/ksca-prez-venkatesh-prasad-met-cm-2025-12-10-18-46-53.jpg)
ಬೆಳಗಾವಿಯಲ್ಲಿ ಸಿಎಂ, ಡಿಸಿಎಂ ಭೇಟಿ ಮಾಡಿದ ಕೆಎಸ್‌ಸಿಎ ನಿಯೋಗ
ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯುವ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಜಸ್ಟೀಸ್ ಮೈಕೆಲ್ ಡಿ.ಕುನ್ಹಾ ಸಮಿತಿಯು ನೀಡಿರುವ ಸಲಹೆಗಳನ್ನು ಹಂತ ಹಂತವಾಗಿ ಜಾರಿಗೊಳಿಸುವುದು ನಮ್ಮ ಆಲೋಚನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೆಎಸ್ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.
/filters:format(webp)/newsfirstlive-kannada/media/media_files/2025/12/10/ksca-prez-venkatesh-prasad-met-dks-2025-12-10-18-47-55.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us