/newsfirstlive-kannada/media/media_files/2025/12/22/chinnaswamy-stadium-1-2025-12-22-15-32-58.jpg)
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮತ್ತೆ ಮ್ಯಾಚ್ ಗೆ ಅನುಮತಿ
ಆರ್ ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯುವುದು ಭಾಗಶಃ ಖಚಿತವಾಗಿದೆ. ಕೆಎಸ್‌ಸಿಎ ಗೆ ಪಂದ್ಯ ನಡೆಸಲು ಷರತ್ತುಗಳನ್ನು ವಿಧಿಸಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಹಾಗೂ ರಾಜ್ಯ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಈ ಹಿನ್ನಲೆಯಲ್ಲಿ ಇಂದು ಕೆಎಸ್‌ಸಿಎ ನಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಕಾಲ್ತುಳಿತ ಪ್ರಕರಣ ನಂತರ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲು ರಾಜ್ಯ ಸರ್ಕಾರ ಹಿಂದೇಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಹಾಗೂ ನಗರ ಪೊಲೀಸ್ ಆಯುಕ್ತರನ್ನು KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಭೇಟಿಯಾಗಿದ್ದರು. ಪಂದ್ಯಗಳನ್ನು ನಡೆಸಲು ಅವಕಾಶ ಕೋರಿ ಸರ್ಕಾರಕ್ಕೂ ಮನವಿ ಮಾಡಿದ್ದರು. ಇಂದಿನ ಸಭೆ ಬಳಿಕ ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ಪೊಲೀಸ್ ಇಲಾಖೆಯಿಂದ ಗ್ರಿನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿಯಮಗಳನ್ನು ಸೂಚಿಸಿ ಷರತ್ತುಗಳನ್ನು ವಿಧಿಸಿ ಬೆಂಗಳೂರು ನಗರ ಪೊಲೀಸರು ಅನುಮತಿ ನೀಡುವರು.
ಈಗಾಗಲೇ ಬೆಂಗಳೂರು ನಗರ ಪೊಲೀಸರು ಸೂಚಿಸಿರುವ ಪ್ರಕಾರ, ಸ್ಟೇಡಿಯಂನಲ್ಲಿ ಕೆಲವೊಂದು ಬದಲಾವಣೆ ಮಾಡಲಾಗುತ್ತಿದೆ. ವಿಶೇಷವಾಗಿ ವಿಶಾಲವಾಗಿ ಎಂಟ್ರಿ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಅಗ್ನಿಶಾಮಕ ಪರಿಕರಗಳ ಅಳವಡಿಕೆ ಕಾರ್ಯ ಕೂಡ ನಡೆದಿದೆ. ಅಗ್ನಿಶಾಮಕ ದಳದಿಂದಲೂ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ. ಸ್ಟೇಡಿಯಂನೊಳಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳು ಬರುವಂತೆ ವಿಶಾಲವಾಗಿ ಎಂಟ್ರಿ, ಎಕ್ಸಿಟ್ ಗೇಟ್ ನಿರ್ಮಿಸುವಂತೆ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಈಗ ನಿರ್ಮಾಣ ಕಾರ್ಯ ನಡೆಯುತ್ತಿದೆ.
/filters:format(webp)/newsfirstlive-kannada/media/media_files/2025/12/22/chinnaswamy-stadium-2025-12-22-15-33-40.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us