/newsfirstlive-kannada/media/media_files/2025/09/14/team-india-pakistan-match-2025-09-14-14-02-39.jpg)
ಏಷ್ಯಾಕಪ್ 2025ರ ಇಂದಿನ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಸೆಣಸಾಡಲಿವೆ. ಈ ಪಂದ್ಯಕ್ಕೀಗ ಬಾಯ್ಕಾಟ್ ಬಿಸಿ ತಟ್ಟಿದೆ. ಕಳೆದ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು. ಪಹಲ್ಗಾಮ್ ದಾಳಿಗೆ ಪಾಕಿಸ್ತಾನವೇ ಕಾರಣ. ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಕೂಡ ನಡೆದಿತ್ತು. ಈ ಎಲ್ಲಾ ಬೆಳವಣಿಗಳ ನಡುವೆ ಪಾಕ್ ವಿರುದ್ಧ ಭಾರತ ಪಂದ್ಯ ಆಡ್ತಿರೋದು ಹಲವರ ವಿರೋಧಕ್ಕೆ ಕಾರಣವಾಗಿದೆ.
ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಶುಭಂ ದ್ವಿವೇದಿ ಪತ್ನಿ ಐಶಾನ್ಯಾ ದ್ವಿವೇದಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. 2025ರ ಏಷ್ಯಾ ಕಪ್ನ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಬಿಸಿಸಿಐ ಒಪ್ಪಿಕೊಳ್ಳಬಾರದಿತ್ತು. ದಾಳಿಗೊಳಗಾದ 26 ಕುಟುಂಬಗಳ ಬಗ್ಗೆ ಬಿಸಿಸಿಐ ಭಾವನಾತ್ಮಕವಾಗಿಲ್ಲ ಎಂದು ಭಾವಿಸುತ್ತೇನೆ. ಕ್ರಿಕೆಟಿಗರನ್ನು ರಾಷ್ಟ್ರೀಯವಾದಿಗಳು ಎಂದು ಹೇಳಲಾಗುತ್ತದೆ. ಒಬ್ಬರು, ಇಬ್ಬರು ಕ್ರಿಕೆಟ್ ಆಟಗಾರರ ಹೊರತುಪಡಿಸಿ, ಯಾರೊಬ್ಬರೂ ಪಂದ್ಯವನ್ನು ಬಹಿಷ್ಕರಿಸಬೇಕೆಂದು ಯಾರೂ ಮುಂದೆ ಬರಲಿಲ್ಲ.
ಬಿಸಿಸಿಐ ಅವರನ್ನು ಬಂದೂಕಿನ ಮೇಲೆ ಆಡುವಂತೆ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ದೇಶದ ಪರವಾಗಿ ನಿಲುವು ತೆಗೆದುಕೊಳ್ಳಬೇಕು. ಆದರೆ ಅವರು ಹಾಗೆ ಮಾಡುತ್ತಿಲ್ಲ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪಾಕ್ಗೆ ಸೂರ್ಯ ಎಚ್ಚರಿಕೆ.. ತ್ರಿವಳಿಗಳಿಗೆ ಕಾದಿದೆ ಮಾರಿಹಬ್ಬ..!