/newsfirstlive-kannada/media/media_files/2026/02/23/shivam-dube-and-hardik-pandya-2026-02-23-09-27-06.jpg)
ಲೀಗ್ ಹಂತದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ, ಸೂಪರ್-8ರ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಇಲ್ಲಿನ ನಮೋ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಲಾಗದೆ ಭಾರತದ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಪರಿಣಾಮವಾಗಿ ಭಾರತ 76 ರನ್‌ಗಳ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.
ಭಾರತದ ಬ್ಯಾಟಿಂಗ್ ವೈಫಲ್ಯ
188 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಆರಂಭಿಕ ಆಟಗಾರ ಇಶಾನ್ ಕಿಶನ್ ಮೊದಲ ಓವರ್‌ನಲ್ಲೇ ಮಾರ್ಕ್ರಮ್ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಬಂದ ತಿಲಕ್ ವರ್ಮಾ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದರು. ಸತತ ವೈಫಲ್ಯ ಅನುಭವಿಸಿದ್ದ ಅಭಿಷೇಕ್ ಶರ್ಮಾ ಖಾತೆ ತೆರೆದರೂ, ಕಾರ್ಬಿನ್ ಬಾಷ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು (15 ರನ್).
ಇದನ್ನೂ ಓದಿ:ಜೂನ್ ಅಂತ್ಯದೊಳಗೆ ಜಿ.ಪಂ, ತಾ.ಪಂ ಎಲೆಕ್ಷನ್ ಫಿಕ್ಸ್! ಸ್ಥಳೀಯ ಚುನಾವಣೆ ಬಗ್ಗೆ CM ಮಹತ್ವದ ಘೋಷಣೆ
/filters:format(webp)/newsfirstlive-kannada/media/media_files/2026/02/23/team-india-23-2026-02-23-09-28-30.jpg)
ನಂತರ ಬಂದ ವಾಷಿಂಗ್ಟನ್ ಸುಂದರ್ (11), ಭರವಸೆ ಮೂಡಿಸಿದ್ದ ಸೂರ್ಯಕುಮಾರ್ ಯಾದವ್ (18) ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ (18) ಯಾರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ರಿಂಕು ಸಿಂಗ್ ಶೂನ್ಯ ಸುತ್ತಿದರೆ, ಅರ್ಷ್‌ದೀಪ್ ಸಿಂಗ್ 1 ರನ್‌ಗೆ ಸುಸ್ತಾದರು.
ಶಿವಂ ದುಬೆ ಏಕಾಂಗಿ ಹೋರಾಟ
ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ, ಆಲ್ರೌಂಡರ್ ಶಿವಂ ದುಬೆ ಏಕಾಂಗಿ ಹೋರಾಟ ನಡೆಸಿದರು. 37 ಎಸೆತಗಳನ್ನು ಎದುರಿಸಿದ ಅವರು 3 ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ 42 ರನ್ ಗಳಿಸಿ ತಂಡದ ಮೊತ್ತ 100ರ ಗಡಿ ದಾಟುವಂತೆ ಮಾಡಿದರು. ಅಂತಿಮವಾಗಿ ಟೀಮ್ ಇಂಡಿಯಾ 111 ರನ್‌ಗಳಿಗೆ ಆಲೌಟ್ ಆಯಿತು.
ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಅಬ್ಬರ
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದರು. ಕ್ವಿಂಟನ್ ಡಿ ಕಾಕ್, ಏಡನ್ ಮಾರ್ಕ್ರಮ್ ಮತ್ತು ರಿಯಾನ್ ರಿಕಲ್ಟನ್ ಬೇಗನೆ ಪೆವಿಲಿಯನ್ ಸೇರಿದರು.
ಆದರೆ, 4ನೇ ವಿಕೆಟ್‌ಗೆ ಒಂದಾದ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಜೋಡಿ ಭಾರತದ ಬೌಲರ್‌ಗಳನ್ನು ಕಾಡಿತು. ಈ ಜೋಡಿ 51 ಎಸೆತಗಳಲ್ಲಿ 97 ರನ್ ಸಿಡಿಸಿತು. ಡೆವಾಲ್ಡ್ ಬ್ರೆವಿಸ್ 29 ಎಸೆತಗಳಲ್ಲಿ 45 ರನ್ (3 ಬೌಂಡರಿ, 3 ಸಿಕ್ಸರ್) ಗಳಿಸಿದರೆ, 'ಕಿಲ್ಲರ್' ಖ್ಯಾತಿಯ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ 63 ರನ್ (7 ಬೌಂಡರಿ, 3 ಸಿಕ್ಸರ್) ಚಚ್ಚಿದರು. ಅಂತಿಮ ಹಂತದಲ್ಲಿ ಟ್ರಿಸ್ಟನ್ ಸ್ಟಬ್ಸ್ 24 ಎಸೆತಗಳಲ್ಲಿ ಅಜೇಯ 44 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 187ಕ್ಕೆ ತಲುಪಿಸಿದರು.
ಭಾರತದ ಪರ ಬುಮ್ರಾ 3 ವಿಕೆಟ್ ಪಡೆದರೆ, ಅರ್ಷ್‌ದೀಪ್ ಸಿಂಗ್ 2, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.
ಇದನ್ನೂ ಓದಿ: ಕರ್ನಾಟಕದ ಅತೀ ದೊಡ್ಡ EV Ready ಎಕ್ಸ್​​ಪೋ.. ಇವತ್ತೇ ಕೊನೆ ದಿನ, ಈಗಲೇ ಭೇಟಿ ನೀಡಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us