/newsfirstlive-kannada/media/media_files/2025/08/12/stadiam_ai_photo-2025-08-12-12-21-17.jpg)
ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅವಘಡ ಸಂಭವಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕ್ರೀಡೆಗೆ ಹೆಚ್ಚಿನ ಹೊತ್ತು ಕೊಡಲು ಉದ್ಯಾನ ನಗರಿಯಲ್ಲಿ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಶೇರ್ ಮಾಡಿದ್ದು, ಉದ್ಯಾನಗರಿಯ ಮೊಮ್ಮಸಂದ್ರದ ಸೂರ್ಯಸಿಟಿಯಲ್ಲಿ ಮೆಗಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 75 ಎಕರೆಯಲ್ಲಿ 1,650 ಕೋಟಿ ರೂಪಾಯಿ ವೆಚ್ಚದಲ್ಲಿ 60,000 ಆಸನಗಳ ಸಾಮರ್ಥ್ಯವುಳ್ಳ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಟ್ಮ್ಯಾನ್ ರೋಹಿತ್, ವಿರಾಟ್ ಕೊಹ್ಲಿ ಇನ್ನು ಕ್ರಿಕೆಟ್ ಆಡಬೇಕಾ..? ಈ ಷರತ್ತುಗಳು ಅನ್ವಯ!
ರಾಜ್ಯದ ಅತಿ ದೊಡ್ಡ ಸ್ಟೇಡಿಯಂ ಇದಾಗಲಿದ್ದು ಇದರಲ್ಲಿ ಒಳಾಂಗಣ, ಹೊರಂಗಾಣ ಕ್ರೀಡಾಂಗಣಗಳು, ಅತ್ಯಾಧುನಿಕ ಜಿಮ್, ತರಬೇತಿ ಕೌಶಲ್ಯಗಳು, ಒಲಿಂಪಿಕ್ ಗಾತ್ರದ ಈಜು ಕೊಳಗಳು, ಅತಿಥಿ ಗೃಹಗಳು, ಹಾಸ್ಟೆಲ್ಗಳು, ಹೋಟೆಲ್ಗಳು ಮತ್ತು ಅಂತರಾಷ್ಟ್ರೀಯ ಕಾರ್ಯಕ್ರಮಗಳಿಗಾಗಿ ಕನ್ವೆನ್ಷನ್ ಹಾಲ್ ಅನ್ನು ಒಳಂಗೊಂಡಿರುತ್ತದೆ.
2025ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದಿತ್ತು. ಈ ಸಂಬಂಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡುವಾಗ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ 11 ಜನರು ಜೀವ ಕಳೆದುಕೊಂಡಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಷ್ಟೊಂದು ಸ್ಥಳ ಇಲ್ಲದ ಕಾರಣ ಜನರು ಹೆಚ್ಚು ಸೇರಿದ್ದರಿಂದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೊಡ್ಡ ಮೈದಾನ ನಿರ್ಮಾಣಕ್ಕೆ ಕೈ ಹಾಕಿದೆ.
ಬೆಂಗಳೂರು ಜನರಿಗೆ ಸಿಹಿ ಸುದ್ದಿ!
— DK Shivakumar (@DKShivakumar) August 12, 2025
ರಾಜಧಾನಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅನುಮೋದನೆ:
- ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ
- 75 ಎಕರೆ ಪ್ರದೇಶದಲ್ಲಿ
- ₹1,650 ಕೋಟಿ ವೆಚ್ಚ
- 60,000 ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
Bengaluru’s Sporting Leap: Great news for… pic.twitter.com/WtP8Ydsn31
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ