/newsfirstlive-kannada/media/media_files/2026/03/05/ind-vs-eng-2026-03-05-15-34-16.jpg)
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಡೀ ಕ್ರಿಕೆಟ್ ಲೋಕವೇ ಕುತೂಹಲದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ನ್ಯೂಜಿಲೆಂಡ್ ಈಗಾಗಲೇ ಫೈನಲ್‌ಗೆ
ಬುಧವಾರ ರಾತ್ರಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದ ನ್ಯೂಜಿಲೆಂಡ್ ತಂಡ ಫೈನಲ್‌ಗೆ ಲಗ್ಗೆ ಇಟ್ಟ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂದು ಗೆಲ್ಲುವ ತಂಡ ಭಾನುವಾರ (ಮಾರ್ಚ್ 8) ಅಹಮದಾಬಾದ್‌ನಲ್ಲಿ ನಡೆಯುವ ಮಹಾಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಕೆವಿನ್ ಪೀಟರ್ಸನ್ ನುಡಿದ ಭವಿಷ್ಯವೇನು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ನ ಮಾಜಿ ದಿಗ್ಗಜ ಬ್ಯಾಟರ್ ಕೆವಿನ್ ಪೀಟರ್ಸನ್ ಸಾಮಾಜಿಕ ಜಾಲತಾಣ 'X' (ಟ್ವಿಟರ್) ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಇಂದಿನ ಪಂದ್ಯದಲ್ಲಿ ಭಾರತ ಸೋಲಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
‘ಭಾನುವಾರ ನಡೆಯುವ ಟಿ20 ವಿಶ್ವಕಪ್ ಫೈನಲ್ ಪಂದ್ಯ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ಇರಲಿದೆ. ಇದು ಉತ್ತಮ ಪಂದ್ಯವಾಗಲಿದೆ’ ಎಂದು ಪೀಟರ್ಸನ್ ಬರೆದುಕೊಂಡಿದ್ದಾರೆ. ಅಂದರೆ ಪೀಟರ್ಸನ್ ಪ್ರಕಾರ, ಇಂಗ್ಲೆಂಡ್ ತಂಡ ಭಾರತವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಲಿದೆ ಎಂದರ್ಥ. ಇನ್ನು, ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಇತಿಹಾಸ ರೋಚಕವಾಗಿದೆ. 2024ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ 68 ರನ್‌ಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿತ್ತು. ಆದರೆ 2022ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 10 ವಿಕೆಟ್‌ಗಳಿಂದ ಮಣಿಸಿತ್ತು. ಹೀಗಾಗಿ ಇಂದಿನ ಪಂದ್ಯ ಸೇಡಿನ ಸಮರವಾಗಿಯೂ ಮಾರ್ಪಟ್ಟಿದೆ.
ಇದನ್ನೂ ಓದಿ:ದೇವನಹಳ್ಳಿಯಲ್ಲಿ 20 ಲಕ್ಷ ರೂಪಾಯಿ ದರೋಡೆ.. ಕಳ್ಳರು ಹಣಕ್ಕಾಗಿ ಏನೆಲ್ಲ ಪ್ಲಾನ್ ಮಾಡ್ತಾರೆ ನೋಡಿ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us