/newsfirstlive-kannada/media/media_files/2025/11/18/venkatesh-prasad-1-2025-11-18-07-53-47.jpg)
ಬೆಂಗಳೂರು: ಚುನಾವಣೆಗೂ ಮುನ್ನವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಅಧ್ಯಕ್ಷರಾಗಿ ವೆಂಕಟೇಶ್​ ಪ್ರಸಾದ್ ಅವರು​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ರಿಜೇಶ್​ ಪಟೇಲ್​ ಬಣದ ಅಭ್ಯರ್ಥಿ ಶಾಂತಕುಮಾರ್​ ಅವರ ನಾಮಪತ್ರ ತಿರಸ್ಕೃತವಾದ ಹಿನ್ನೆಲೆಯಲ್ಲಿ ವೆಂಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಚುನಾವಣಾ ಪ್ರಕ್ರಿಯೆ ಶುರುವಾಗಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಿನ್ನೆ ನಡೆದ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ಅಸಿಂಧುಗೊಂಡಿದೆ. ಶಾಂತಕುಮಾರ್, ಡೆಕ್ಕನ್​ ಹೆರಾಲ್ಡ್​, ಪ್ರಜಾವಾಣಿ ಸ್ಪೋರ್ಟ್ಸ್​ ಕ್ಲಬ್​ ಪ್ರತಿನಿಧಿಸುತ್ತಿದ್ದರು.
2013ರ ಬಳಿಕ ಮತ್ತೆ ಕೆಎಸ್​ಸಿಎ ಆಡಳಿತಕ್ಕೆ ವೆಂಕಟೇಶ್​ ಮತ್ತೆ ವಾಪಸ್ ಆಗಿದ್ದಾರೆ. 2010-13ರವರೆಗೆ ಕೆಎಸ್​ಸಿಎ ಉಪಾಧ್ಯಕ್ಷರಾಗಿದ್ದ ವೆಂಕಟೇಶ್​ ಪ್ರಸಾದ್​ ಸೇವೆ ಸಲ್ಲಿಸಿದ್ದರು. ಆಗ KSCA ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ. 1994ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us