ಟಿ-20 ವಿಶ್ವಕಪ್ ಮುನ್ನವೇ ಪಾಕ್ ವಿವಾದ.. ಹಠಮಾರಿ ಧೋರಣೆಗೆ ICC ಎಚ್ಚರಿಕೆ..!

ಕ್ರಿಕೆಟ್ ಲೋಕದ ಬಹುನಿರೀಕ್ಷಿತ 2026ರ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಹಠ ಹಿಡಿಯುವ ಮೂಲಕ ಟೂರ್ನಿಯಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

author-image
Ganesh Kerekuli
India vs pakistan
Advertisment
  • ಕೊಲಂಬೋದಲ್ಲಿ ನಡೀಬೇಕಿರುವ ಟಿ20 ವಿಶ್ವಕಪ್​ ಪಂದ್ಯ
  • 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಭಾಗವಹಿಸುತ್ತೆ
  • ಆದ್ರೆ ಭಾರತದ ವಿರುದ್ಧ ಪಂದ್ಯ ಆಡೋದಿಲ್ಲವೆಂದ ಪಿಸಿಬಿ

ಕೊಲಂಬೋ: ಕ್ರಿಕೆಟ್ ಲೋಕದ ಬಹುನಿರೀಕ್ಷಿತ 2026ರ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಹಠ ಹಿಡಿಯುವ ಮೂಲಕ ಟೂರ್ನಿಯಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

2026ರ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿವೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಈ ಮಹಾಸಮರ ನಡೆಯಲಿದೆ. ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 15ರಂದು ಕೊಲಂಬೋದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಬೇಕಿದೆ. ಆದರೆ, ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ.

ಬಾಂಗ್ಲಾ ಬೆಂಬಲಿಸಿ ಹಿಂದೆ ಸರಿಯುವ ಪ್ಲಾನ್ ಇತ್ತೇ?

ಮೂಲಗಳ ಪ್ರಕಾರ, ಆರಂಭದಲ್ಲಿ ಬಾಂಗ್ಲಾದೇಶವನ್ನು ಬೆಂಬಲಿಸಿ ಇಡೀ ಟಿ20 ವಿಶ್ವಕಪ್ ಟೂರ್ನಿಯಿಂದಲೇ ಹಿಂದೆ ಸರಿಯಲು ಪಾಕಿಸ್ತಾನ ಚಿಂತನೆ ನಡೆಸಿತ್ತು. ಐಸಿಸಿ (ICC) ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಬೆನ್ನಲ್ಲೇ ಎದ್ದೂ ಬಿದ್ದೂ ತನ್ನ ತಂಡವನ್ನು ಪ್ರಕಟಿಸಿತ್ತು. ಈಗ ಟೂರ್ನಿಯಲ್ಲಿ ಭಾಗವಹಿಸುವುದಾಗಿ ಹೇಳಿರುವ ಪಿಸಿಬಿ, ಕೇವಲ ಭಾರತದ ವಿರುದ್ಧದ ಪಂದ್ಯಕ್ಕೆ ಮಾತ್ರ ಅಡ್ಡಗಾಲು ಹಾಕುತ್ತಿದೆ. ವಿಶೇಷವೆಂದರೆ ಈ ನಿರ್ಧಾರಕ್ಕೆ ಪಿಸಿಬಿ ಯಾವುದೇ ಸ್ಪಷ್ಟ ಕಾರಣಗಳನ್ನು ನೀಡಿಲ್ಲ.

ನಾಯಕ ಸಲ್ಮಾನ್ ಅಲಿ ಆಘಾ ಅಸಹಾಯಕತೆ

ಈ ಬೆಳವಣಿಗೆಯ ಕುರಿತು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಪ್ರತಿಕ್ರಿಯಿಸಿದ್ದು, ಮಂಡಳಿಯ ನಿರ್ಧಾರದ ಮುಂದೆ ತಾನು ಅಸಹಾಯಕ ಎಂದು ಹೇಳಿಕೊಂಡಿದ್ದಾರೆ. ನಾವೇನೂ ಮಾಡಲು ಸಾಧ್ಯವಿಲ್ಲ, ಮಂಡಳಿಯ ಆದೇಶಗಳನ್ನು ಪಾಲಿಸುವುದು ಅಷ್ಟೇ ನಮ್ಮ ಕೆಲಸ ಎಂದು ಅವರು ಹೇಳುವ ಮೂಲಕ ತಂಡದೊಳಗಿನ ಗೊಂದಲವನ್ನು ಹೊರಹಾಕಿದ್ದಾರೆ.

ಪಾಕಿಸ್ತಾನದ ಈ ಹಠಮಾರಿ ಧೋರಣೆಗೆ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ಪಿಸಿಬಿಗೆ ಮತ್ತೊಮ್ಮೆ ವಾರ್ನಿಂಗ್ ನೀಡಿರುವ ಐಸಿಸಿ, "ಒಂದು ವೇಳೆ ನಿಗದಿತ ಪಂದ್ಯವನ್ನು ಆಡಲು ನಿರಾಕರಿಸಿದರೆ ಅದರ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ" ಎಂದು ಎಚ್ಚರಿಸಿದೆ. ಇದು ಪಾಕ್ ತಂಡದ ಮೇಲೆ ನಿಷೇಧ ಅಥವಾ ಅಂಕಗಳ ಕಡಿತಕ್ಕೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಪಾಕ್ ತಂಡದ ಈ ನಡೆ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ:ನಯನ ಅಲೆಲೆ ಅತೀ ನಯನ.. ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್​ಗೆ ಬಿಗ್ ಟ್ವಿಸ್ಟ್​..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

india vs pakistan T20 world cup Pakistan boycott
Advertisment