/newsfirstlive-kannada/media/media_files/2026/01/16/badminton-association-meeting-with-cm-2026-01-16-19-35-18.jpg)
ಕುಮಾರ್ ಬಂಗಾರಪ್ಪ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳ ಅಗತ್ಯತೆ ಕುರಿತ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಿಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ತಮ್ಮ ಅಸೋಸಿಯೇಷನ್ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ದಿ ಹಾಗೂ ಮೂಲಸೌಕರ್ಯದ ಅಭಿವೃದ್ದಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಬೇಕೆಂದು ವಿಶೇಷ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಸರ್ಕಾರ ನೀಡುತ್ತಿರುವ ಮಹತ್ವದ ಬೆಂಬಲ ಶ್ಲಾಘನೀಯವಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಕಳೆದ ಏಳು ದಶಕಗಳಿಂದ ಸಾವಿರಾರು ಪ್ರತಿಭಾವಂತ ಆಟಗಾರರನ್ನು ರೂಪಿಸಿ, ದೇಶ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದೆ. ಪದ್ಮಶ್ರೀ ಪ್ರಕಾಶ್ ಪಡುಕೋಣೆ, ಲಕ್ಷ್ಯ ಸೇನ್ ಸೇರಿದಂತೆ ಅನೇಕ ಶ್ರೇಷ್ಠ ಆಟಗಾರರು ಇದಕ್ಕೆ ಸಾಕ್ಷಿಯಾಗಿದ್ದಾರೆ.
ಇಂದಿನ ಸ್ಪರ್ಧಾತ್ಮಕ ಕ್ರೀಡಾ ಯುಗದಲ್ಲಿ ನಮ್ಮ ಯುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅತ್ಯಾಧುನಿಕ ಮೂಲಸೌಕರ್ಯ, ವೈಜ್ಞಾನಿಕ ತರಬೇತಿ ಮತ್ತು ಸಮಗ್ರ ಬೆಂಬಲ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ತನ್ನ ಮೂಲಸೌಕರ್ಯ ವಿಸ್ತರಣೆ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಹಾಗೂ ತರಬೇತಿ ಕೇಂದ್ರಗಳ ಸ್ಥಾಪನೆ, ಜೊತೆಗೆ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳ ಪ್ರತಿಭೆಗಳ ಉತ್ತೇಜನಕ್ಕೆ ಸರ್ಕಾರದ ಸಹಕಾರವನ್ನು ನೀಡುವಂತೆ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಕರ್ನಾಟಕದ ಪ್ರತಿಯೊಂದು ಮೂಲೆಯಿಂದ ಪ್ರತಿಭೆಗಳು ಹೊರಹೊಮ್ಮಿ, ರಾಜ್ಯವು ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೇರಲಿ ಎಂಬುದು ನಮ್ಮ ಸಂಕಲ್ಪ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2026/01/16/badminton-association-meeting-with-cm-1-2026-01-16-19-36-02.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us