/newsfirstlive-kannada/media/media_files/2026/01/04/jadeja-vs-parag-2026-01-04-15-24-49.jpg)
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ (Rajasthan Royals) ಫ್ರಾಂಚೈಸಿ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಯುವ ಆಲ್‌ರೌಂಡರ್ ರಿಯಾನ್ ಪರಾಗ್ (Riyan Parag) ಅವರಿಗೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.
ಜಡೇಜಾಗಿಲ್ಲ ಮಣೆ!
ತಂಡದಲ್ಲಿರುವ ಅನುಭವಿ ತಾರೆ ರವೀಂದ್ರ ಜಡೇಜಾ (Ravindra Jadeja) ಅವರ ಹೆಸರೂ ನಾಯಕತ್ವದ ರೇಸ್‌ನಲ್ಲಿ ಕೇಳಿಬಂದಿತ್ತು. ಆದರೆ, ಫ್ರಾಂಚೈಸಿ ಆಡಳಿತ ಮಂಡಳಿ ಅಂತಿಮವಾಗಿ ಯುವ ಆಟಗಾರ ರಿಯಾನ್ ಪರಾಗ್ ಮೇಲೆ ನಂಬಿಕೆ ಇಟ್ಟು ಈ ದೊಡ್ಡ ಜವಾಬ್ದಾರಿ ನೀಡಿದೆ.
ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್..!
ಪರಾಗ್‌ಗೆ ಒಲಿದು ಬಂದ ಅದೃಷ್ಟವೇಕೆ?
ರಿಯಾನ್ ಪರಾಗ್ ದೇಶೀಯ ಕ್ರಿಕೆಟ್‌ನಲ್ಲಿ ಅಸ್ಸಾಂ ತಂಡದ ನಾಯಕರಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕಳೆದ ಐಪಿಎಲ್ ಸೀಸನ್‌ನಲ್ಲಿ (IPL 2025) ತಮ್ಮ ಬ್ಯಾಟಿಂಗ್ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ತಂಡದ ದೀರ್ಘಕಾಲದ ಭವಿಷ್ಯದ ದೃಷ್ಟಿಯಿಂದ (Future Investment) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ.
ಅಭಿಮಾನಿಗಳಿಗೆ ಶಾಕ್ ಮತ್ತು ಸರ್ಪ್ರೈಸ್
ಒಂದು ಕಾಲದಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದ್ದ ರಿಯಾನ್ ಪರಾಗ್, ಈಗ ಐಪಿಎಲ್ ತಂಡವೊಂದರ ಕ್ಯಾಪ್ಟನ್ ಆಗಿ ಬಡ್ತಿ ಪಡೆದಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರವೀಂದ್ರ ಜಡೇಜಾ ಅವರಂತಹ ಹಿರಿಯರ ಬೆಂಬಲದೊಂದಿಗೆ ರಿಯಾನ್ ತಂಡವನ್ನು ಹೇಗೆ ಮುನ್ನಡೆಸುತ್ತಾರೆ ಎಂಬುದೇ ಈಗಿರುವ ಕುತೂಹಲ. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ‘ಯಂಗ್ ಕ್ಯಾಪ್ಟನ್’ ನೇತೃತ್ವದಲ್ಲಿ ಕಪ್ ಗೆಲ್ಲುತ್ತಾ? ಕಾದು ನೋಡಬೇಕಿದೆ.
ಇದನ್ನೂ ಓದಿ: ಬೆಂಗಳೂರು ಮಂದಿಗೆ ‘ಮಜಾ’ ಸಮಾಚಾರ.. ಸಂಜೆ ಎಂಜಾಯ್​ಗೆ GBA ಭರ್ಜರಿ ಪ್ಲಾನ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us