/newsfirstlive-kannada/media/media_files/2026/01/03/shami-and-iyer-2026-01-03-18-00-31.jpg)
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ತಂಡದ ಲಿಸ್ಟ್​ನಲ್ಲಿ ಇಲ್ಲ.
ಟೀಂ ಇಂಡಿಯಾ ಪ್ರಸ್ತುತ ಮುಂಬರುವ ಟಿ20 ವಿಶ್ವಕಪ್ ಮೇಲೆ ಗಮನ ಹರಿಸಿದೆ. ಈ ಕಾರಣದಿಂದಾಗಿ ಹಾರ್ದಿಕ್ ಮತ್ತು ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇಬ್ಬರೂ ತಾರೆಯರು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ.
ಅಯ್ಯರ್ ಆಟ ಫಿಟ್ನೆಸ್ ಮೇಲೆ ಅವಲಂಬನೆ
ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅವರ ಆಟ ಫಿಟ್ನೆಸ್​ ಮೇಲೆ ಅವಲಂಬಿತವಾಗಿದೆ ಎಂದು ಬಿಸಿಸಿಐ ಹೇಳಿದೆ. ಅವರು ಇನ್ನೂ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ನಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದಿಲ್ಲ.
ಶಮಿ ಮತ್ತೆ ಕಡೆಗಣನೆ
ದೇಶೀಯ ಕ್ರಿಕೆಟ್‌ನಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ. ಶಮಿ ಪ್ರಸ್ತುತ 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಂಗಾಳ ಪರ ಆಡುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶಮಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಹೀಗಿದ್ದೂ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.
ಹೇಗಿದೆ ತಂಡ..?
ಶುಬ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ನಿತಿಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್ ತಂಡದಲ್ಲಿ ಇದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us