/newsfirstlive-kannada/media/media_files/2025/10/28/shreyas-iyer-2025-10-28-21-12-57.jpg)
ಗಂಭೀರವಾಗಿ ಗಾಯಗೊಂಡು ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾದ ಸ್ಟಾರ್ ಶ್ರೇಯಸ್ ಅಯ್ಯರ್ ಅವರು, ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್ಸ್ ನೀಡಿದ್ದಾರೆ. ಜೊತೆಗೆ ಆರೋಗ್ಯ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಸ್ತುತ ನಾನು ಚೇತರಿಸಿಕೊಳ್ತಿದ್ದೇನೆ. ದಿನ ಕಳೆದಂತೆ ನನ್ನ ಆರೋಗ್ಯ ಸುಧಾರಿಸುತ್ತಿದೆ. ಬೇಗ ಗುಣಮುಖನಾಗಲೆಂದು ಹಾರೈಸಿದ ನಿಮಗೆ ಮತ್ತು ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಇದು ನನಗೆ ತುಂಬಾ ಅರ್ಥಪೂರ್ಣವಾಗಿದೆ. ನಿಮ್ಮ ಪ್ರಾರ್ಥನೆಗಳಲ್ಲಿ ನನ್ನನ್ನು ಇರಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಯ್ಯರ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: MI ಬಿಡಲು ರೋಹಿತ್ ಶರ್ಮಾ ರೆಡಿ.. ಯಾವ ಫ್ರಾಂಚೈಸಿ ಸೇರ್ತಾರೆ ಹಿಟ್​ಮ್ಯಾನ್..?
ಅಯ್ಯರ್​​ಗೆ ಏನಾಗಿತ್ತು..?
ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದರು. ಆಸ್ಟ್ರೇಲಿಯಾದ ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಶ್ರೇಯಸ್ ಅಯ್ಯರ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಭಾಗದ ಪಕ್ಕೆಲುಬಿಗೆ ತೀವ್ರವಾದ ಗಾಯವಾಗಿದ್ದು ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸಿತ್ತು.. ಕೊನೆಯಲ್ಲಿ ಅಭಿಮಾನಿಗಳಿಗೆ ಕಾದಿದ್ದು ನಿರಾಸೆ..!
— Shreyas Iyer (@ShreyasIyer15) October 30, 2025
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us