/newsfirstlive-kannada/media/media_files/2025/10/27/iyer-2025-10-27-17-52-52.jpg)
ಟೀಂ ಇಂಡಿಯಾಗೆ ಹಾಗೂ ಅಭಿಮಾನಿಗಳಿಗೆ ಸಿಡ್ನಿ ಆಸ್ಪತ್ರೆಯಿಂದ ಸಮಾಧಾನಕರ ಸುದ್ದಿ ಸಿಕ್ಕಿದೆ. ಆಂತರಿಕ ಗಾಯದಿಂದ ಐಸಿಯುಗೆ ಶಿಫ್ಟ್ ಆಗಿದ್ದ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ತಿದ್ದಾರೆ. ಅಲ್ಲದೇ ಐಸಿಯುನಿಂದ ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ ಎಂದು ವರದಿಯಾಗಿದೆ.
31 ವರ್ಷದ ಬ್ಯಾಟ್ಸ್‌ಮನ್ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸ್ಥಿರ ಸ್ಥಿತಿಯಲ್ಲಿದ್ದಾರೆ. ಅವರನ್ನು ಸೂಕ್ಷ್ಮವಾಗಿ ಗಮನಿಸಲು ಬಿಸಿಸಿಐ ತಂಡದ ವೈದ್ಯರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.
ಅಯ್ಯರ್​​ಗೆ ಏನಾಗಿತ್ತು..?
ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದರು. ಎರಡು ದಿನಗಳಿಂದಲೂ ಆಸ್ಟ್ರೇಲಿಯಾದ ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಶ್ರೇಯಸ್ ಅಯ್ಯರ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಭಾಗದ ಪಕ್ಕೆಲುಬಿಗೆ ತೀವ್ರವಾದ ಗಾಯವಾಗಿದ್ದು ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಾಗುತ್ತದೆ. ಏಕೆಂದರೆ ಆಂತರಿಕ ರಕ್ತ ಸ್ರಾವ ಆಗುತ್ತಿದ್ದರಿಂದ ದೇಹದೊಳಗೆ ಸೋಂಕು ಹರಡದಂತೆ ನೋಡಿಕೊಳ್ಳಬೇಕಿದೆ. ಜೊತೆಗೆ ಹೀಗಾಗಿ ಎರಡರಿಂದ 7 ದಿನಗಳವರೆಗೆ ಅಬ್ಸರ್ವ್​ವೇಷನ್​ನಲ್ಲಿ ಅಯ್ಯರ್ ಇದ್ದಾರೆ.
ಇದನ್ನೂ ಓದಿ: ಓರ್ವ ಸ್ಟಾರ್​ ಆಟಗಾರನ ಬಿಟ್ಟುಕೊಡಲು RCB ರೆಡಿ.. ಬಿಗ್​ ಕ್ಯಾಶ್ ಡೀಲ್..!
ಪಂದ್ಯದಲ್ಲಿ ಇಂಜುರಿ ಬಳಿಕ ಡ್ರೆಸ್ಸಿಂಗ್​ ರೂಮ್​ಗೆ ಬಂದಿದ್ದ ಶ್ರೇಯಸ್​ ಅಯ್ಯರ್ ತೀವ್ರ ನೋವಿನಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಬಿಸಿಸಿಐ ವೈದ್ಯಕೀಯ ಟೀಮ್ ಪರೀಕ್ಷಿಸಿ ಸಿಡ್ನಿ ಆಸ್ಪತ್ರೆಗೆ ದಾಖಲು ಮಾಡಿತ್ತು. ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರವಾಗಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳಬಹುದು. ಅಂದರೆ ಮೂರು ವಾರಗಳಿಗಿಂತ ಹೆಚ್ಚಿನ ಸಮಯ ಹಿಡಿಯಬಹುದು ಎಂದು ಹೇಳಲಾಗಿದೆ.
ಇಂಜುರಿಗೆ ಒಳಗಾಗಿದ್ದು ಹೇಗೆ?
ಸಿಡ್ನಿ ಮೈದಾನದಲ್ಲಿ ಮೊದಲ ಬ್ಯಾಟಿಂಗ್ ಮಾಡುತ್ತಿದ್ದ ಆಸ್ಟ್ರೇಲಿಯಾ ತಂಡ 3 ವಿಕೆಟ್​ಗೆ 183 ರನ್​ಗಳಿಂದ ಆಟ ಮುಂದುವರೆಸಿತ್ತು. ಈ ವೇಳೆ ಕ್ರೀಸ್​​ನಲ್ಲಿ ಆಸಿಸ್​ ವಿಕೆಟ್​ ಕೀಪರ್ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್ ಮಾಡುತ್ತಿದ್ದರು. ಹರ್ಷಿತ್ ರಾಣಾ ಬೌಲಿಂಗ್​ನಲ್ಲಿ 24 ರನ್​ ಗಳಿಸಿದ್ದ ಅಲೆಕ್ಸ್ ಕ್ಯಾರಿ ಸಿಕ್ಸರ್ ಬಾರಿಸಲು ಬಾಲ್ ಅನ್ನು ಜೋರಾಗಿ ಬಾರಿಸಿದರು. ಆದರೆ ಬಾಲ್​ ಮೇಲೆ ಹೋಗಿದ್ದರಿಂದ ಶ್ರೇಯಸ್​ ಅಯ್ಯರ್ ಹಿಂದಕ್ಕೆ ಓಡುತ್ತಾ.. ಓಡುತ್ತಾ.. ಡೈವ್ ಮಾಡಿ ಕ್ಯಾಚ್ ಹಿಡಿದರು. ಅಮೋಘವಾದ ಡೈವ್ ಮಾಡಿ ಕ್ಯಾಚ್ ಹಿಡಿಯುವಾಗ ಅವರ ಎಡಭಾಗದ ಪಕ್ಕೆಲುಬಿಗೆ ಗಂಭೀರವಾದ ಪೆಟ್ಟು ಬಿದ್ದಿತ್ತು. ಇದರಿಂದ ತಕ್ಷಣ ಅವರನ್ನು ಸಿಡ್ನಿಯ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು. ಈಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ಶ್ರೇಯಸ್ ಅಯ್ಯರ್​ಗೆ ICU ನಲ್ಲಿ ಚಿಕಿತ್ಸೆ.. ಸಿಡ್ನಿಗೆ ತೆರಳಲು ತಂದೆ, ತಾಯಿಗೆ ಎಮರ್ಜೆನ್ಸಿ ವೀಸಾ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us