/newsfirstlive-kannada/media/media_files/2025/09/14/surya-1-2025-09-14-19-36-22.jpg)
ಏಷ್ಯಾ ಕಪ್ನ ಹೈವೋಲ್ಟೇಜ್ ಮ್ಯಾಚ್ನಲ್ಲಿ ಪಾಕ್ ವಿರುದ್ಧ ಟೀಮ್ ಇಂಡಿಯಾಕ್ಕೆ ಟಾಸ್ ಕೈಕೊಟ್ಟಿದೆ. ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ನ 6ನೇ ಪಂದ್ಯದಲ್ಲಿ ಪಾಕ್ ಕ್ಯಾಪ್ಟನ್ ಸಲ್ಮಾನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಮಾಡಲಿದೆ. ಹಾಲಿ ಚಾಂಪಿಯನ್ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ ಟ್ರೋಫಿ ಮೇಲೆ ಮತ್ತೊಮ್ಮೆ ಕಣ್ಣಿಟ್ಟಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಈಗಾಗಲೇ ಎರಡು ಟೀಮ್ಗಳು ತಲಾ ಒಂದೊಂದು ಪಂದ್ಯ ಗೆದ್ದುಕೊಂಡಿವೆ. ಈಗ ಮತ್ತೊಂದು ಪಂದ್ಯ ಗೆಲ್ಲಲು ಅಖಾಡಕ್ಕಿ ಇಳಿದಿವೆ.
ಭಾರತ ತಂಡ ಸೂರ್ಯಕುಮಾರ್ ನೇತೃತ್ವದಲ್ಲಿ ದುಬೈ ಕ್ರೀಡಾಂಗಣಕ್ಕೆ ಇಳಿದಿದ್ದು ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್ ಮತ್ತೆ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ. ಆದರೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಸ್ಲಾಟ್ ಗಿಲ್ಗೆ ಬಿಟ್ಟುಕೊಟ್ಟಂತೆ ಆಗಿದೆ. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್, ತಿಲಕ್ ವರ್ಮಾ ಅವರು ಕ್ರೀಸ್ಗೆ ಆಗಮಿಸುವರು. ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ ಆಲ್ರೌಂಡರ್ಗಳಾಗಿ ತಂಡದ ಶಕ್ತಿ ಆಗಿದ್ದಾರೆ.
ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಬೌಲಿಂಗ್ ಪಡೆ ಹೊಂದಿದೆ. ಬೂಮ್ರಾ ತಂಡದ ಮೊದಲ ವೇಗಿ ಎನಿಸಿದರೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 2ನೇ ವೇಗದ ಬೌಲರ್ ಆಗಿದ್ದಾರೆ. ಶಿವಂ ದುಬೆ ಮತ್ತೊಮ್ಮೆ ಪರಾಕ್ರಮ ಮೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಇನ್ನು ತಂಡದಲ್ಲಿ ಸ್ಪಿನ್ನರ್ಗಳಿಗೆ ಹೆಚ್ಚು ಅವಕಾಶ ನೀಡಲಾಗಿದ್ದು ಮತ್ತೆ ಕುಲ್ದೀಪ್ ಯಾದವ್ ಮ್ಯಾಜಿಕ್ ಮಾಡಬಹುದು. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ಮ್ಯಾಜಿಕ್ ಮಾಡಲಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್- 11
ಸೂರ್ಯಕುಮಾರ್ ಯಾದವ್ (ನಾಯಕ) ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಪಾಕಿಸ್ತಾನ ತಂಡದ ಪ್ಲೇಯಿಂಗ್- 11
ಸಲ್ಮಾನ್ ಅಘಾ (ನಾಯಕ), ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಫಖರ್ ಜಮಾನ್, ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಕೀಮ್, ಅಬ್ರಾರ್ ಅಹ್ಮದ್.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ