Advertisment

ಪಂದ್ಯದ ಆರಂಭದಲ್ಲೇ ಸೂರ್ಯಗೆ ಗುಡ್ ಲಕ್.. ಪಾಕ್​ ವಿರುದ್ಧ ಭಾರತದ ಪ್ಲೇಯಿಂಗ್- 11 ಹೇಗಿದೆ?

ಈ ಟೂರ್ನಿಯಲ್ಲಿ ಈ ಮೊದಲೇ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ಗ್ರೂಪ್ ಸ್ಟೇಜ್​ನಲ್ಲಿ ಮುಖಾಮುಖಿ ಆಗಿದ್ದವು. ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೂರ್ಯಕುಮಾರ್ ಪಡೆ ಗೆಲುವು ಪಡೆದಿತ್ತು. ಸದ್ಯ ಹ್ಯಾಟ್ರಿಕ್ ಗೆಲುವು ಪಡೆದಿರುವ ಟೀಮ್ ಇಂಡಿಯಾ, ಪಾಕ್ ವಿರುದ್ಧ ವಿಜಯ ಸಾಧಿಸುವ ನಿರೀಕ್ಷೆ ಇದೆ.

author-image
Bhimappa
TEAM_INDIA (9)
Advertisment

2025ರ ಏಷ್ಯಾ ಕಪ್​ನ ಸೂಪರ್​-4 ಹಂತದಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪಾಕಿಸ್ತಾನ ಮೊದಲ ಬ್ಯಾಟಿಂಗ್ ಮಾಡಲಿದೆ. 

Advertisment

ದುಬೈ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್​ನ ಸೂಪರ್-4 ಪಂದ್ಯದಲ್ಲಿ ಪಾಕ್​ ವಿರುದ್ಧ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಟಾಸ್ ಗೆದ್ದು ಮೊದಲ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಸಲ್ಮಾನ್ ಅಲಿ ಆಘಾ ನೇತೃತ್ವದ ಪಾಕಿಸ್ತಾನ ತಂಡ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ.  

ಈ ಟೂರ್ನಿಯಲ್ಲಿ ಈ ಮೊದಲೇ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ಗ್ರೂಪ್ ಸ್ಟೇಜ್​ನಲ್ಲಿ ಮುಖಾಮುಖಿ ಆಗಿದ್ದವು. ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೂರ್ಯಕುಮಾರ್ ಪಡೆ ಗೆಲುವು ಪಡೆದಿತ್ತು. ಸದ್ಯ ಹ್ಯಾಟ್ರಿಕ್ ಗೆಲುವು ಪಡೆದಿರುವ ಟೀಮ್ ಇಂಡಿಯಾ ಪಾಕ್ ವಿರುದ್ಧ ವಿಜಯ ಸಾಧಿಸುವ ನಿರೀಕ್ಷೆಯಲ್ಲಿ ಅಖಾಡಕ್ಕೆ ಎಂಟ್ರಿ ಆಗಿದೆ. ಪಾಕ್ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. 

ಭಾರತ ತಂಡ ಸೂರ್ಯಕುಮಾರ್ ನೇತೃತ್ವದಲ್ಲಿ ದುಬೈ ಕ್ರೀಡಾಂಗಣಕ್ಕೆ ಇಳಿದಿದ್ದು ಅಭಿಷೇಕ್ ಶರ್ಮಾ, ಶುಭ್​ಮನ್​ ಗಿಲ್ ಮತ್ತೆ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ.​ ಆದರೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಯಾವುದಾದರೂ ಸ್ಲಾಟ್​ನಲ್ಲಿ ಕ್ರೀಸ್​ಗೆ ಬರಲಿದ್ದಾರೆ.​​ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಕ್ರೀಸ್​ಗೆ ಆಗಮಿಸುವರು. 

Advertisment

ಇದನ್ನೂ ಓದಿ:ಬಿಗ್ ಬಾಸ್ ಸೀಸನ್- 12; ಸ್ಯಾಂಡಲ್​ವುಡ್​ ನಟಿ ಮೇಘಾ ಶೆಟ್ಟಿ ಫಸ್ಟ್​ ರಿಯಾಕ್ಷನ್

INDVSPAK (1)

ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ​ ತಂಡದಲ್ಲಿ ಪ್ರಮುಖ ಪಾತ್ರವಹಿಸಲ್ಲಿದ್ದಾರೆ. ಸೂರ್ಯಕುಮಾರ್ ಬ್ಯಾಟಿಂಗ್​​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಬೌಲಿಂಗ್​ನಲ್ಲಿ ಕಳೆದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಈ ಪಂದ್ಯಕ್ಕೆ ಮತ್ತೆ ಇಬ್ಬರು ಆಗಮಿಸಿದ್ದಾರೆ. ಈ ಇಬ್ಬರು ಬಂದಿದ್ದರಿಂದ ಯುವ ವೇಗಿಗಳಾದ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್​ ಬೆಂಚ್​​ಗೆ ಸೀಮಿತ ಆಗಿದ್ದಾರೆ. ಸ್ಪಿನ್ನರ್​ ಕುಲ್​ದೀಪ್ ಯಾದವ್ ಮತ್ತೆ ಮ್ಯಾಜಿಕ್ ಮಾಡಬಹುದು.   

ಟೀಮ್ ಇಂಡಿಯಾ ಪ್ಲೇಯಿಂಗ್​- 11 

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ 

Advertisment

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ 

Surya kumar Yadav Asia Cup 2025 Dubai Cricket Ind vs Pak
Advertisment
Advertisment
Advertisment