/newsfirstlive-kannada/media/post_attachments/wp-content/uploads/2025/03/Varun-Chakravarthy.jpg)
ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಆಡುತ್ತಾರೋ ಇಲ್ಲವೋ ಎಂಬುದು ಇದೀಗ ಅತಿದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವರು 4 ಓವರ್‌ಗಳಲ್ಲಿ ಬರೋಬ್ಬರಿ 64 ರನ್ ಚಚ್ಚಿಸಿಕೊಂಡಿದ್ದರು.
ಅವರ ಈ ಕಳಪೆ ಪ್ರದರ್ಶನದ ಬಗ್ಗೆ ವಿಶ್ವದಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ಇದೇ ಕಾರಣಕ್ಕಾಗಿ ಅವರನ್ನು ಫೈನಲ್ ಪಂದ್ಯದ ಪ್ಲೇಯಿಂಗ್ 11 (ಅಂತಿಮ-11) ನಿಂದ ಕೈಬಿಡುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಹಾಗಾದರೆ ವರುಣ್ ಚಕ್ರವರ್ತಿ ಫೈನಲ್ ಆಡುತ್ತಾರಾ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್.
ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?
ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ‘ವರುಣ್ ಚಕ್ರವರ್ತಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಇರುತ್ತಾರೆಯೇ?’ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ ಅವರು, ‘ಚಕ್ರವರ್ತಿ ಅವರ ಫಾರ್ಮ್ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ಚಿಂತಿತವಾಗಿಲ್ಲ ಹಾಗೂ ತಂಡಕ್ಕೆ ಅವರ ಮೇಲೆ ಸಂಪೂರ್ಣ ನಂಬಿಕೆಯಿದೆ ಎಂದರು. ಸೂರ್ಯ ಅವರ ಈ ಹೇಳಿಕೆಯು ವರುಣ್ ಚಕ್ರವರ್ತಿ ಫೈನಲ್ ಪಂದ್ಯದಲ್ಲೂ ಕಣಕ್ಕಿಳಿಯುವ ಸ್ಪಷ್ಟ ಮುನ್ಸೂಚನೆ ನೀಡಿತ್ತು.
ಇದನ್ನೂ ಓದಿ: ಮುಂದಿನ 1 ತಿಂಗಳು ರಷ್ಯಾದಿಂದ ಕಚ್ಚಾತೈಲ ಖರೀದಿಸುವ ಭಾರತ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬಗ್ಗೆ ಪ್ಯಾನಿಕ್ ಅಗತ್ಯವೇ ಇಲ್ಲ!
ನೆಟ್ಸ್‌ನಲ್ಲಿ ಕುಲದೀಪ್‌ಗೆ ಮಣೆ, ವರುಣ್ ಹಿಂದಕ್ಕೆ?
ಈ ಹೇಳಿಕೆಯ ನಡುವೆ ಇದೀಗ ಮತ್ತೊಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ. ಸಾಮಾನ್ಯವಾಗಿ ಟೀಮ್ ಇಂಡಿಯಾದ ಅಭ್ಯಾಸದ ಅವಧಿ (ಟೈನಿಂಗ್ ಸೆಷನ್) ಇದ್ದಾಗ, ವರುಣ್ ಚಕ್ರವರ್ತಿ ಮೈದಾನಕ್ಕೆ ಬರುವ ಮೊದಲಿಗರಲ್ಲಿ ಒಬ್ಬರಾಗಿರುತ್ತಿದ್ದರು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಅಭ್ಯಾಸಕ್ಕೆ ಇಳಿದಾಗ, ಉಳಿದ ಆಟಗಾರರು ಅಭ್ಯಾಸ ಮಾಡುತ್ತಿದ್ದರೆ ವರುಣ್ ಚಕ್ರವರ್ತಿ ಮಾತ್ರ ಹಿಂದೆ ನಿಂತಿದ್ದರು.
ಇದನ್ನೂ ಓದಿ: ಇರಾನ್ ಮೇಲೆ ಇಸ್ರೇಲ್, ಅಮೆರಿಕಾ ಯುದ್ಧ ಹಿನ್ನಲೆ: ಕರ್ನಾಟಕದ ಕರಾವಳಿಯಿಂದ ರಫ್ತು ಬಂದ್, ಉದ್ಯಮಿಗಳಿಗೆ ಹೊಡೆತ
/filters:format(webp)/newsfirstlive-kannada/media/media_files/2025/09/10/varun_chakravarty-2025-09-10-21-42-38.jpg)
ಮತ್ತೊಂದು ಅಚ್ಚರಿಯ ಸಂಗತಿಯೆಂದರೆ, ನೆಟ್ಸ್‌ನಲ್ಲಿ ಮುಂಚಿತವಾಗಿ ಅಭ್ಯಾಸ ಆರಂಭಿಸಿದ ಮೊದಲ ಆಟಗಾರರಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್ ಕೂಡ ಒಬ್ಬರಾಗಿದ್ದರು. ಇದು ಫೈನಲ್ ಪಂದ್ಯದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕುಲದೀಪ್ ಯಾದವ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಮ್ಯಾನೇಜ್ಮೆಂಟ್ ಗಂಭೀರವಾಗಿ ಚಿಂತನೆ ನಡೆಸುತ್ತಿರುವ ಮುನ್ಸೂಚನೆ ನೀಡಿದೆ.
ಹೆಚ್ಚು ವಿಕೆಟ್ ಪಡೆದರೂ ದುಬಾರಿ!
ವರುಣ್ ಚಕ್ರವರ್ತಿ ಕಳೆದ ಕೆಲವು ಪಂದ್ಯಗಳಲ್ಲಿ ಅತ್ಯಂತ ದುಬಾರಿಯಾಗಿದ್ದಾರೆ. ಟಿ20 ವಿಶ್ವಕಪ್‌ನ ಕಳೆದ 4 ಪಂದ್ಯಗಳಲ್ಲಿ ಅವರು ಬರೋಬ್ಬರಿ 186 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ ವಿಶ್ವಕಪ್‌ನ ಮೊದಲ 4 ಪಂದ್ಯಗಳಲ್ಲಿ ಅವರು ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿ 9 ವಿಕೆಟ್‌ಗಳನ್ನು ಕಬಳಿಸಿದ್ದರು. ಒಟ್ಟಾರೆಯಾಗಿ 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವರುಣ್ ಚಕ್ರವರ್ತಿ ಇದುವರೆಗೆ 13 ವಿಕೆಟ್‌ಗಳನ್ನು ಪಡೆದಿದ್ದು, ಸದ್ಯ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಿರುವಾಗ ನಿರ್ಣಾಯಕ ಫೈನಲ್ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್, ವರುಣ್ ಚಕ್ರವರ್ತಿಗೆ ಮಣೆ ಹಾಕುತ್ತಾರಾ ಅಥವಾ ಕುಲದೀಪ್ ಯಾದವ್‌ಗೆ ಅವಕಾಶ ನೀಡುತ್ತಾರಾ ಕಾದು ನೋಡಬೇಕಿದೆ.
ಇದನ್ನೂ ಓದಿ: GBA ಚುನಾವಣೆಗೆ ವೇದಿಕೆ ಸಜ್ಜು: 369 ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟ.. ಬೆಂಗಳೂರಿನ ರಾಜಕೀಯದಲ್ಲಿ ಸಂಚಲನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us