Advertisment

ಭಾರತ ತಂಡಕ್ಕಿದೆ 39 ವರ್ಷಗಳ ಹಳೆಯ ಸೇಡು.. ಇವತ್ತು ಲೆಕ್ಕ ಚುಕ್ತಾ ಮಾಡೋದು ಪಕ್ಕಾ..!

ಐಸಿಸಿ ಟಿ20 ವಿಶ್ವಕಪ್ 2026ರ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯವು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

author-image
Ganesh Kerekuli
team india (22)
Advertisment

ಐಸಿಸಿ ಟಿ20 ವಿಶ್ವಕಪ್ 2026ರ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯವು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಎರಡು ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಪ್ರಸ್ತುತ ಉಭಯ ತಂಡಗಳು ತಲಾ ಒಂದು ಪಂದ್ಯ ಗೆದ್ದು 1-1 ಸಮಬಲ ಸಾಧಿಸಿವೆ.

Advertisment

ಈ ಪಂದ್ಯದ ಅತಿ ದೊಡ್ಡ ವಿಶೇಷವೆಂದರೆ, ಬರೋಬ್ಬರಿ 39 ವರ್ಷಗಳ ನಂತರ ಇವೆರಡು ತಂಡಗಳು ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕಾಗಿ ವಾಂಖೆಡೆ ಮೈದಾನದಲ್ಲಿ ಸೆಣಸಾಡುತ್ತಿವೆ!

1987ರ ಆ ಒಂದು ಕಹಿ ನೆನಪು:

ಕೊನೆಯ ಬಾರಿಗೆ 1987ರ ಏಕದಿನ ವಿಶ್ವಕಪ್ (ಅಂದು ರಿಲಯನ್ಸ್ ವರ್ಲ್ಡ್ ಕಪ್) ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಅಂದು ಕಪಿಲ್ ದೇವ್ ನೇತೃತ್ವದ ಟೀಮ್ ಇಂಡಿಯಾ ಡಿಫೆಂಡಿಂಗ್ ಚಾಂಪಿಯನ್ ಆಗಿ ಕಣಕ್ಕಿಳಿದಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್, ಗ್ರಹಾಂ ಗೂಚ್ ಅವರ ಶತಕದ ನೆರವಿನಿಂದ 254 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ 219 ರನ್‌ಗಳಿಗೆ ಆಲೌಟ್ ಆಗುವ ಮೂಲಕ 35 ರನ್‌ಗಳಿಂದ ಸೋಲನುಭವಿಸಿತ್ತು. ಆ ಸೋಲು ಕೋಟ್ಯಂತರ ಭಾರತೀಯರ ಹೃದಯ ಒಡೆದಿತ್ತು.

ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಸಮರದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೆವಿನ್ ಪೀಟರ್ಸನ್..!

Advertisment

2022: ಅಡಿಲೇಡ್‌ನಲ್ಲಿ ಇಂಗ್ಲೆಂಡ್ ಅಬ್ಬರ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಎರಡು ತಂಡಗಳು ಮೊದಲ ಬಾರಿಗೆ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದ್ದು 2022ರಲ್ಲಿ. ಅಡಿಲೇಡ್ ಓವಲ್‌ನಲ್ಲಿ ನಡೆದ ಈ ಪಂದ್ಯ ಭಾರತದ ಪಾಲಿಗೆ ದುಃಸ್ವಪ್ನವಾಗಿತ್ತು. ಭಾರತ ನೀಡಿದ್ದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್‌ನ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಜೋಡಿ ಒಂದೂ ವಿಕೆಟ್ ಕಳೆದುಕೊಳ್ಳದೆ ಬೆನ್ನಟ್ಟಿತ್ತು. ಇಂಗ್ಲೆಂಡ್ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು.

2024: ಭಾರತದ ಅಮೋಘ ಸೇಡು

2022ರ ಸೋಲಿಗೆ ಭಾರತ 2024ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸರಿಯಾದ ತಿರುಗೇಟು ನೀಡಿತ್ತು. ಜಾರ್ಜ್‌ಟೌನ್‌ನ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ 171 ರನ್ ಗಳಿಸಿತ್ತು. ನಂತರ ಸ್ಪಿನ್ನರ್‌ಗಳಾದ ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಲಾ 3 ವಿಕೆಟ್ ಪಡೆದು ಇಂಗ್ಲೆಂಡ್ ತಂಡವನ್ನು ಕೇವಲ 103 ರನ್‌ಗಳಿಗೆ ಕಟ್ಟಿಹಾಕಿದ್ದರು. ಭಾರತ 68 ರನ್‌ಗಳ ಭರ್ಜರಿ ಜಯದೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿತ್ತು.

ಇಂದು ಯಾರಿಗೆ ಜಯ?

ಈಗ 2026ರ ಸೆಮಿಫೈನಲ್‌ನಲ್ಲಿ ಮೂರನೇ ಮುಖಾಮುಖಿ ನಡೆಯುತ್ತಿದೆ. 1987ರ ಸೆಮಿಫೈನಲ್ ಸೋಲಿಗೆ ಅದೇ ವಾಂಖೆಡೆ ಮೈದಾನದಲ್ಲಿ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಇದು ಸುಸಮಯ. ವಾಂಖೆಡೆಯ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿದ್ದು, ಹೈ-ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು. ಗೆದ್ದ ತಂಡ ಭಾನುವಾರ ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಫೈನಲ್ ಆಡಲಿದೆ.

Advertisment

ಇದನ್ನೂ ಓದಿ: ದೇವನಹಳ್ಳಿಯಲ್ಲಿ 20 ಲಕ್ಷ ರೂಪಾಯಿ ದರೋಡೆ.. ಕಳ್ಳರು ಹಣಕ್ಕಾಗಿ ಏನೆಲ್ಲ ಪ್ಲಾನ್ ಮಾಡ್ತಾರೆ ನೋಡಿ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

India vs England T20 world cup Chinnaswamy Stadium
Advertisment
Advertisment
Advertisment