/newsfirstlive-kannada/media/media_files/2026/02/06/rcb-21-2026-02-06-10-58-24.jpg)
ಎರಡನೇ ಬಾರಿಗೆ ಚಾಂಪಿಯನ್ ಆದ ಆರ್​ಸಿಬಿಗೆ ಭಾರಿ ಮೊತ್ತದ ಬಹುಮಾನವೂ ಸಿಕ್ಕಿದೆ. ಫೈನಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಹಾಗೆಯೇ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ.
ಡಬ್ಲ್ಯುಪಿಎಲ್ ಮೊದಲ ಆವೃತ್ತಿಯಿಂದಲೂ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಕ್ಕೆ ಇಷ್ಟೇ ಮೊತ್ತದ ಬಹುಮಾನವನ್ನ ನೀಡಲಾಗುತ್ತಿದೆ. ಜೊತೆಗೆ ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಅಂದ್ರೆ ಆರೆಂಜ್ ಕ್ಯಾಪ್ ಹೊಂದಿದ್ದ ಸ್ಮೃತಿ ಮಂಧಾನ, ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಅಂದ್ರೆ ಪರ್ಪಲ್ ಕ್ಯಾಪ್ ಹೊಂದಿದ್ದ ಸೋಫಿ ಡಿವೈನ್ ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು.
ಅತಿ ಹೆಚ್ಚು ಸಿಕ್ಸರ್‌ಗಳನ್ನ ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us