ಸ್ಯಾಂಡಲ್ವುಡ್ ನಟಿ ಶೃತಿ ಹರಿಹರನ್‌ಗೆ ಮತ್ತೆ ಮೀಟೂ ಕಂಟಕ!
ಬಿ -ರಿಪೋರ್ಟ್ ಚಾಲೆಂಜ್ ಮಾಡಿದ್ದ ನಟಿಗೆ ಕೋರ್ಟ್ ನೋಟಿಸ್!
ಕೋರ್ಟ್ಗೆ ಸಾಕ್ಷ್ಯಾಧಾರಗಳನ್ನು ಒದಗಿಸ್ತಾರಾ ನಟಿ ಹರಿಹರನ್?
2018ರಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಇಬ್ಬರೂ ಜೊತೆಯಾಗಿ ವಿಸ್ಮಯ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಶೂಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಶೃತಿ ಗಂಭೀರವಾಗಿ ಆರೋಪ ಮಾಡಿದ್ದರು. ಈ ಪ್ರಕರಣ ಸಂಬಂಧ ನಟಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದರು. ಈ ಚಿತ್ರವು 2017ರಲ್ಲಿ ತೆರೆ ಕಂಡಿತ್ತು. ಆ ಸಂದರ್ಭದಲ್ಲಿ ನಟಿಯ ಬಗ್ಗೆ ಸಾಕಷ್ಟು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.
ಇನ್ನು, ಈ ಕೇಸ್ಗೆ ಸಂಬಂಧಪಟ್ಟಂತೆ ಕಬ್ಬನ್ ಪಾರ್ಕ್ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಆದರೆ ನಟ ಅರ್ಜುನ್ ಸರ್ಜಾ ಅವರು ನಟಿ ಶೃತಿ ಹರಿಹರನ್‌ಗೆ ಕಿರುಕುಳ ನೀಡಿದ್ದಾರೆ ಎಂಬುವುದಕ್ಕೆ ನಿಖರವಾದ ಸಾಕ್ಷ್ಯಾಧಾರಗಳು ಇಲ್ಲ ಎಂಬ ಕಾರಣ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ಶೃತಿ ಹರಿಹರನ್ ಅರ್ಜಿ ಸಲ್ಲಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ ಮಾಡಲಾದ ಆರೋಪಕ್ಕೆ ನಿಖರವಾದ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿಗೆ ನೋಟೀಸ್ ಜಾರಿ ಮಾಡಿದೆ. ಕೋರ್ಟ್ ಸೂಚನೆಯಂತೆ ಶೃತಿ ಹರಿಹರನ್ ನ್ಯಾಯಾಲಯಕ್ಕೆ ದಾಖಲೆ ಸಮೇತ ಸಾಕ್ಷ್ಯಾಧಾರಗಳನ್ನು ಒದಗಿಸುತ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ