/newsfirstlive-kannada/media/post_attachments/wp-content/uploads/2023/06/SSLC_RESULT.jpg)
ಇಂದಿನಿಂದ 2023/24 ನೇ ಸಾಲಿನ sslc ಪರೀಕ್ಷೆ-1 ಆರಂಭವಾಗಲಿದ್ದು, ರಾಜ್ಯದ್ಯಂತ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ವ್ಯಾಪಕ ವಿರೋಧದ ಮಧ್ಯೆಯೂ ಸಿಸಿಟಿವಿ, ವೆಬ್ ಕಾಸ್ಟಿಂಗ್ ಇದ್ದೂ ಪರೀಕ್ಷಾ ಕೇಂದ್ರಗಳಲ್ಲಿ ತಯಾರಿ ನಡೆದಿದೆ. ರಿಜಿಸ್ಟರ್ ನಂಬರ್ ಬರೆದಾಗಿದೆ. ಸಿಸಿಟಿವಿ ಪ್ರತೀ ಕೊಠಡಿಯಲ್ಲಿ ಫಿಕ್ಸ್ ಆಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆಯೂ ಆಗಿದೆ.
/newsfirstlive-kannada/media/post_attachments/wp-content/uploads/2024/02/PUC_EXAMS.jpg)
ಇಂದಿನ 10ನೇ ತರಗತಿಯ ಪರೀಕ್ಷೆಗೆ ಇಷ್ಟೆಲ್ಲ ಸಕಲ ತಯಾರಿಯನ್ನು ಶಿಕ್ಷಣ ಇಲಾಖೆ ಮಾಡಿಕೊಳ್ತಾಯಿದೆ. 2,750 ಕೇಂದ್ರಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳಾಗಿದ್ದು, 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2023/09/9_11_BOARD_EXAMS.jpg)
ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಕೇಂದ್ರಗಳ ಸುತ್ತಾಮುತ್ತಾ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಿದ್ದು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ವಹಿಸಲಾಗಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಇಂದಿನಿಂದ ಆರಂಭವಾಗುವ SSLC ಪರೀಕ್ಷೆ-1 ಏಪ್ರೀಲ್ 6ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆ ಕೂಡ ಮಾಡಲಾಗಿದೆ. SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಬಿಸಿಯೂಟದ ವ್ಯವಸ್ಥೆ ಮಾಡಿದ್ದು, SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಐಎಎಸ್​​, ನೀಟ್, ಜೆಇಇ, ಯಾವುದೇ ಪರೀಕ್ಷೆಗೆ ಇಲ್ಲದ ಕಣ್ಗಾವಲು, ವೆಬ್ ಕಾಸ್ಟಿಂಗ್ SSLC ಪರೀಕ್ಷೆಗೆ ಇರುವುದಕ್ಕೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಇನ್ನು, ನಿಮ್ಮ ನಿಮ್ಮ ಮಕ್ಕಳನ್ನೂ ಪರೀಕ್ಷಾ ಕೊಠಡಿಗೆ ಕಳಿಸೋ ಮುನ್ನ ಅವರಿಗೆ ಪೆನ್ನು, ನೀರಿನ ಬಾಟಲಿ, ಹಾಲ್ ಟಿಕೆಟ್, ಐಡಿ ಕಾರ್ಡ್​ ಇನ್ನಿತರ ವಸ್ತುಗಳನ್ನು ನೆನಪು ಮಾಡುವುದನ್ನು ಪೋಷಕರೇ ಮಿಸ್​ ಮಾಡಬೇಡಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us