newsfirstkannada.com

ಇಂದು SSLC ಫಲಿತಾಂಶ ಪ್ರಕಟ; ರಿಸಲ್ಟ್​​ ನೋಡೋದು ಹೇಗೆ ಗೊತ್ತಾ?

Share :

Published May 9, 2024 at 6:05am

    ಇಂದು ಒಟ್ಟು 8.69 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರದ ಮಹತ್ವದ ದಿನ

    2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅಲ್ಲಿ 8.69 ಲಕ್ಷ ವಿದ್ಯಾರ್ಥಿಗಳು

    SSLC ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

ಇಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಹು ಮುಖ್ಯವಾದ ದಿನ. ಇಷ್ಟು ದಿನ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಶುಭದಿನ. ಚೆನ್ನಾಗಿ ಪರೀಕ್ಷೆ ಬರೆದು ಫಲಿತಾಂಶಕ್ಕೆಂದು ಅದೇಷ್ಟೋ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಜೊತೆಗೆ ಪೋಷಕರಲ್ಲೂ ಆತಂಕ ಮನೆಮಾಡಿದೆ. ಏಕೆಂದರೆ ಮಕ್ಕಳು ಪರೀಕ್ಷೆಯಲ್ಲಿ ಪಾಸ್​ ಆಗುತ್ತಾರೋ ಇಲ್ಲವೋ ಅಂತ ಯೋಚನೆ ಮಾಡುತ್ತಿದ್ದಾರೆ.

ಹೌದು, ಇಂದು 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶವನ್ನು ಪ್ರಕಟ ಮಾಡಲಿದೆ. ಹೀಗಾಗಿ SSLC ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತು ಕುಳಿತಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಆಪ್ತನ ವಿರುದ್ಧ ದೇಶಾದ್ಯಂತ ಆಕ್ರೋಶ.. ಕೊನೆಗೂ ಸ್ಯಾಮ್ ಪಿತ್ರೋಡಾ ತಲೆದಂಡ; ಹೇಳಿದ್ದೇನು?

ಇನ್ನು, ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇಂದು ಇವರ ಭವಿಷ್ಯ ನಿರ್ಧಾರವಾಗಲಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು SSLC ಫಲಿತಾಂಶ ಪ್ರಕಟ; ರಿಸಲ್ಟ್​​ ನೋಡೋದು ಹೇಗೆ ಗೊತ್ತಾ?

https://newsfirstlive.com/wp-content/uploads/2024/05/sslc.jpg

Load More