/newsfirstlive-kannada/media/post_attachments/wp-content/uploads/2024/09/TEAM-INDIA-1.jpg)
ಕ್ಯಾಪ್ಟನ್​ ರೋಹಿತ್​ ಶರ್ಮಾ ನೇತೃತ್ವದ ಟೀಮ್ ಇಂಡಿಯಾ 2 ಟೆಸ್ಟ್‌ಗಳ ಸರಣಿಯಲ್ಲಿ ಬಾಂಗ್ಲಾದೇಶವನ್ನು 2-0 ಅಂತರದಿಂದ ಸೋಲಿಸುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ಈಗ ಟೀಮ್​ ಇಂಡಿಯಾ ತವರಿನಲ್ಲಿ ಅಕ್ಟೋಬರ್ 16ನೇ ತಾರೀಕಿನಿಂದ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ. ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಬಳಿಕ ರೋಹಿತ್​​​ ಪಡೆ ಆಸ್ಟ್ರೇಲಿಯಾ ವಿರುದ್ಧ ದೊಡ್ಡ ಪೈಪೋಟಿ ನಡೆಸಲಿದೆ.
ನವೆಂಬರ್​ನಿಂದ ಜನವರಿ ತಿಂಗಳವರಗೆ ಟೀಮ್​​ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್​​ ಗವಾಸ್ಕರ್ ಟ್ರೋಫಿ ಆಡಲಿದೆ. ಇದು 5 ಪಂದ್ಯಗಳ ಟೆಸ್ಟ್ ಸರಣಿ ಆಗಿದೆ. ನವೆಂಬರ್ 22 ರಿಂದಲೇ ಪರ್ತ್​​ ಸ್ಟೇಡಿಯಮ್​ನಲ್ಲಿ ಮೊದಲ ಟೆಸ್ಟ್ ಶುರುವಾಗಲಿದೆ. ಹಾಗಾಗಿ ಇದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ದೊಡ್ಡ ಸವಾಲು ಎದುರಾಗಲಿದೆ. ಇದರ ಮಧ್ಯೆ ಆಸ್ಟ್ರೇಲಿಯಾ ತಂಡಕ್ಕೂ ಒಂದು ಬ್ಯಾಡ್​ನ್ಯೂಸ್​ ಇದೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಟೂರ್ನಿಯಲ್ಲಿ ಗೆಲ್ಲೋ ತಂಡ ನೇರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶ ಮಾಡಲಿದೆ. ಹಾಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಗೆಲುವಿಗಾಗಿ ರಣತಂತ್ರವನ್ನು ಹೆಣೆದುಕೊಂಡಿವೆ. ಟೀಮ್ ಇಂಡಿಯಾ ಈ ಸರಣಿಗಾಗಿ ತನ್ನ ಬಲಿಷ್ಠ ತಂಡವನ್ನು ಕಳುಹಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಅದಕ್ಕೂ ಮೊದಲು ಆಸ್ಟ್ರೇಲಿಯಾ ತಂಡಕ್ಕೆ ಭಾರೀ ಹಿನ್ನಡೆ ಆಗಿದೆ. ಆಸೀಸ್ ತಂಡದ ಸ್ಟಾರ್ ಆಲ್‌ರೌಂಡರ್ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.
/newsfirstlive-kannada/media/post_attachments/wp-content/uploads/2023/12/Cameron-green.jpg)
ಟೂರ್ನಿಯಿಂದಲೇ ಗ್ರೀನ್​ ಔಟ್​​
ಗಾಯಕ್ಕೆ ತುತ್ತಾಗಿರೋ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​​ ಮತ್ಯಾರು ಅಲ್ಲ, ಕ್ಯಾಮರೂನ್ ಗ್ರೀನ್. ಇವರು ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಹೊರಗುಳಿಯೋದು ಪಕ್ಕಾ ಅನ್ನೋ ಮಾಹಿತಿ ಲಭ್ಯವಾಗಿದೆ. ಇವರು ಭಾರತ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರ ನಡೆದ್ರೆ ಆಸ್ಟ್ರೇಲಿಯಾಗೆ ದೊಡ್ಡ ಆಘಾತ ಎದುರಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us