/newsfirstlive-kannada/media/post_attachments/wp-content/uploads/2024/05/HARDIK_PANDYA-1.jpg)
2 ತಿಂಗಳ ಹಿಂದೆ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಿದ್ರು. ಈ ಸೀಸನ್ನಲ್ಲಿ ಮುಂಬೈ ತಂಡದ ಪರ ಕ್ಯಾಪ್ಟನ್ ಆಗಿ ಅಷ್ಟೇ ಅಲ್ಲದೆ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲೂ ಕಳಪೆ ಪ್ರದರ್ಶನ ನೀಡಿದ್ರು. ಈ ಮೂಲಕ ಹಾರ್ದಿಕ್ ರೋಹಿತ್ ಶರ್ಮಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ರೋಹಿತ್ ಆಭಿಮಾನಿಗಳಿಂದ ಹಾರ್ದಿಕ್ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಇದರ ಪರಿಣಾಮ ಟೂರ್ನಿಯಿಂದಲೇ ಮುಂಬೈ ಹೊರ ಬಿದ್ದಿತ್ತು.
ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ರೂ ಪಾಂಡ್ಯ ಅವರನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಯ್ತು. ಆಗ ಹಾರ್ದಿಕ್ ಪಾಂಡ್ಯ ಆಯ್ಕೆ ಸರಿಯಲ್ಲ ಎಂದು ಫ್ಯಾನ್ಸ್ ಆಕ್ರೋಶ ಹೊರಹಾಕಿದ್ರು. ಈ ಎಲ್ಲದರ ಮಧ್ಯೆ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಸದ್ದು ಮಾಡಿದ ಕಾರಣ ಕುಗ್ಗಿ ಹೋಗಿದ್ದರು. ಈ ಎಲ್ಲಾ ಅವಮಾನಗಳನ್ನು ಎದುರಿಸಿದ್ದ ಹಾರ್ದಿಕ್ 2024 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಬ್ಬರಿಸಿದ್ರು.
ವೆಸ್ಟ್ ಇಂಡೀಸ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿತ್ತು. ಇದಕ್ಕೆ ಕಾರಣ ಹಾರ್ದಿಕ್ ಪಾಂಡ್ಯ ಎಸೆದ ಕೊನೆ ಓವರ್‌ನಲ್ಲಿ. ಇವರು ತಮ್ಮ ಕೊನೆ ಓವರ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಭಾರತ ತಂಡವನ್ನು ಗೆಲ್ಲಿಸಿದ್ರು.
ಇನ್ನು, ಕೇವಲ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಾತ್ರವಲ್ಲ ಇಡೀ ಟೂರ್ನಿಯುದ್ಧಕ್ಕೂ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದ್ರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಲ್ಲೂ ದಿ ಬೆಸ್ಟ್ ಪರ್ಫಾಮೆನ್ಸ್ ಕೊಟ್ಟರು. ಈ ಮೂಲಕ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ರು.
ಹಾರ್ದಿಕ್ಗೆ ಟಿ20 ಆಲ್‌ರೌಂಡರ್ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನ
ಹಾರ್ದಿಕ್ ಐಸಿಸಿ ಪುರುಷರ ಟಿ-20 ಅಲ್ ರೌಂಡರ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಅವರೊಂದಿಗೆ 222 ಅಂಕಗಳೊಂದಿಗೆ ಜಂಟಿ ಅಗ್ರಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಹಾರ್ದಿಕ್ ಆಡಿದ 8 ಪಂದ್ಯಗಳಲ್ಲಿ 1 ಅರ್ಧಶತಕ ಸೇರಿ 150 ಸ್ಟ್ರೈಕ್ ರೇಟ್ನಲ್ಲಿ ಸುಮಾರು 140 ರನ್ ಗಳಿಸಿದ್ರು. ಜತೆಗೆ 11 ವಿಕೆಟ್ ಪಡೆದುಕೊಂಡಿದ್ದರು.
ಇದನ್ನೂ ಓದಿ:ಐಪಿಎಲ್ ಸೋಲು; ಹೆಂಡತಿಯಿಂದ ಅವಮಾನ; ಮಾನಸಿಕವಾಗಿ ಕುಗ್ಗಿ ಹೋಗಿದ್ದ ಹಾರ್ದಿಕ್ ಕಮ್ಬ್ಯಾಕ್ ಕಥೆ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್